Mysore
29
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಇದನ್ನು ಓದಿ: ರೈಲು ನಿಲ್ದಾಣಗಳಿಗೆ ಭೇಟಿ,ಪರಿಶೀಲನೆ ನಡೆಸಿದ ಡಿಆರ್‌ಎಂ ಮುದಿತ್‌ ಮಿತ್ತಲ್‌ 

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಐದು ವರ್ಷಗಳಿಂದಲೂ ಪಿಎಸ್‌ಐ ಹುದ್ದೆಗೆ ನೇಮಕಾತಿ ಆಗಿಲ್ಲ. ಈ ಹಿಂದೆ ೫೪೫ ಪಿಎಸ್‌ಐ ಹುದ್ದೆಗಳ ನೇಮಕಾತಿ ಸಂಬಂಧ ನಡೆದಂತಹ ಪ್ರಕರಣವನ್ನು ಬಗೆಹರಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ತರಬೇತಿಗಾಗಿ ನಿಯೋಜಿಸಲಾಗಿದೆ. ಮೂರು ತಿಂಗಳುಗಳಲ್ಲಿ ತರಬೇತಿ ಪೂರ್ಣಗೊಳ್ಳಲಿದ್ದು, ಬಳಿಕ ಖಾಲಿ ಇರುವ ಅಥವಾ ಅಗತ್ಯ ಇರುವ ಸ್ಥಳಗಳಲ್ಲಿ ಪಿಎಸ್‌ಐಗಳನ್ನು ನೇಮಕ ಮಾಡಲಾಗುವುದು. ಪೊಲೀಸ್ ಕಾನ್ಸ್‌ಟೆಬಲ್‌ಗಳ ನೇಮಕಾತಿಗಾಗಿಯೂ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಯಾಗಿ ಬಂದ ಬಳಿಕ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದರು.

Tags:
error: Content is protected !!