ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಇದನ್ನು ಓದಿ: ರೈಲು ನಿಲ್ದಾಣಗಳಿಗೆ ಭೇಟಿ,ಪರಿಶೀಲನೆ ನಡೆಸಿದ ಡಿಆರ್‌ಎಂ ಮುದಿತ್ ಮಿತ್ತಲ್
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಐದು ವರ್ಷಗಳಿಂದಲೂ ಪಿಎಸ್‌ಐ ಹುದ್ದೆಗೆ ನೇಮಕಾತಿ ಆಗಿಲ್ಲ. ಈ ಹಿಂದೆ ೫೪೫ ಪಿಎಸ್‌ಐ ಹುದ್ದೆಗಳ ನೇಮಕಾತಿ ಸಂಬಂಧ ನಡೆದಂತಹ ಪ್ರಕರಣವನ್ನು ಬಗೆಹರಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ತರಬೇತಿಗಾಗಿ ನಿಯೋಜಿಸಲಾಗಿದೆ. ಮೂರು ತಿಂಗಳುಗಳಲ್ಲಿ ತರಬೇತಿ ಪೂರ್ಣಗೊಳ್ಳಲಿದ್ದು, ಬಳಿಕ ಖಾಲಿ ಇರುವ ಅಥವಾ ಅಗತ್ಯ ಇರುವ ಸ್ಥಳಗಳಲ್ಲಿ ಪಿಎಸ್‌ಐಗಳನ್ನು ನೇಮಕ ಮಾಡಲಾಗುವುದು. ಪೊಲೀಸ್ ಕಾನ್ಸ್‌ಟೆಬಲ್‌ಗಳ ನೇಮಕಾತಿಗಾಗಿಯೂ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಯಾಗಿ ಬಂದ ಬಳಿಕ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದರು.
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…
ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…