Mysore
23
overcast clouds
Light
Dark

ಸೆ.22ಕ್ಕೆ ಪಿಎಸ್‌ಐ ಲಿಖಿತ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು 402 ಪೊಲೀಸ್ ಸಬ್ ಇನ್ಸ್‍ಪೆಕ್ಟರ್(ಪಿಎಸ್‌ಐ) ಹುದ್ದೆಗಳಿಗೆ ಸೆಪ್ಟಂಬರ್ 22ರಂದು ಲಿಖಿತ ಪರೀಕ್ಷೆ ನಡೆಸಲಿದೆ.

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಪರೀಕ್ಷೆಗೆ ಸಕಲ ಸಿದ್ಧತೆ ನಡಸಿಕೊಂಡಿದ್ದೇವೆ. ಒಟ್ಟು 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.

ಇದಲ್ಲದೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ ಸೆ.29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅಕ್ಟೋಬರ್ 27ಕ್ಕೆ ನಡೆಯುವ ಪ್ರಮುಖ ಪರೀಕ್ಷೆಗೆ ಅರ್ಹತೆ ಪಡೆಯಲಿದ್ದಾರೆ. ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ 5.7ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದು ಈ ಪರೀಕ್ಷೆಗೂ ತಯಾರಿ ನಡೆಸಲಾಗಿದೆ ಎಂದು ಕೆಇಎ ಹೇಳಿದೆ.