ಬೆಂಗಳೂರು : ಜನತೆ ಹನಿ ನೀರಿಗೂ ಪರಿತಪಿಸುತ್ತಿದ್ದರೆ, ಅತ್ತ ಸಿಎಂ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಚಾಟಿ ಬೀಸಿದ್ದಾರೆ.
ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಎಂದು ಅವರು ಸರ್ಕಾರದ ವಿರುದ್ದ ಟ್ವೀಟ್ ಮಾಡಿ ಹರಿಹಾಯ್ದಿದ್ದಾರೆ.
ರಾಜ್ಯದಲ್ಲಿ 900 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಗುಳೇ ಹೋಗಿದ್ದಾರೆ, 40ಕ್ಕೂ ಹೆಚ್ಚು ನೇಕಾರರು ದಿಕ್ಕು ಕಾಣದೆ ಜೀವ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಜನ ತೊಟ್ಟು ನೀರಿಗೂ ಪರದಾಡುತ್ತಿದ್ದಾರೆ.
ರಾಜ್ಯದಲ್ಲಿ ಇಂತಹ ಸೂತಕದ ವಾತಾವರಣ ಇರುವಾಗ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಪ್ರತಿ ತಾಲೂಕಿಗೆ 50 ಲಕ್ಷ, ಪ್ರತಿ ಜಿಲ್ಲೆಗೆ ಒಂದು ಕೋಟಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಎರಡು ಕೋಟಿ ಖರ್ಚು ಮಾಡಿ ಉತ್ಸವ ಮಾಡುತ್ತಿದೀರಲ್ಲ ಸಿಎಂ ಸಿದ್ದರಾಮಯ್ಯ ನವರೇ, ನಿಮಗೆ ಕಿಂಚಿತ್ತಾದರೂ ಮಾನವೀಯತೆ, ಕರ್ತವ್ಯ ಪ್ರಜ್ಞೆ ಇದೆಯೇ ಎಂದು ಕಾರವಾಗಿ ಪ್ರಶ್ನಿಸಿದ್ದಾರೆ.
ಗ್ಯಾರೆಂಟಿ ಸಮಾವೇಶಕ್ಕಾಗಿ ನೂರಾರು ಕೋಟಿ ಪೋಲು ಮಾಡುವ ಬದಲು ಜನರಿಗೆ ನೀರಿನ ವ್ಯವಸ್ಥೆ ಮಾಡಬಹುದಿತ್ತು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ಕೂಡಬಹುದಿತ್ತಲ್ಲವೆ, ರಾಜ್ಯದ ಜನತೆ ಇಲ್ಲಿ ಅವಸ್ಥೆ ಪಡುತ್ತಿದ್ದರೆ ನಿಮಗೆ ಚುನಾವಣಾ ಪ್ರಚಾರವೇ ಹೆಚ್ಚಾಗಿ ಹೋಯಿತೇ ಎಂದು ಕಿಡಿಕಾರಿದ್ದಾರೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…
ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…
371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…