ರಾಜ್ಯ

ಕೇಂದ್ರದ ನೀತಿ ಖಂಡಿಸಿ ಜನಾಕ್ರೋಶ ಯಾತ್ರೆ: ಡಿಕೆ ಶಿವಕುಮಾರ್‌

ಬೆಂಗಳೂರು: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಏ.17 ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಕಾಂಗ್ರೆಸ್‌ ಜನಾಕ್ರೋಶ ಯಾತ್ರೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಈಗಾಗಲೇ ನಮ್ಮ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸುತ್ತಿದೆ. ಇದು ನಮ್ಮ ಸರ್ಕಾರದ ವಿರುದ್ಧ ಅಲ್ಲ. ಬೆಲೆ ಏರಿಕೆ ಮಾಡುತ್ತಿರುವುದು ಮೋದಿ ನೇತೃತ್ವದ ಕೇಂದ್ರ ಸರ್ಕಾರ. ಅವರ ಸರ್ಕಾರದ ವಿರುದ್ದ ಅವರೇ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ನಮ್ಮ ವಿರುದ್ದ ಯಾತ್ರೆ ಮಾಡುವಂತದು ಏನು ಇಲ್ಲ. ಕೇಂದ್ರದ ನೀತಿಗಳಿಂದ ದೇಶದ ಎಲ್ಲ ವರ್ಗದ ಜನರಿಗೆ ಸಮಸ್ಯೆಯಾಗಿದೆ. ಬಿಜೆಪಿಯವರು ಕೇಂದ್ರ ಸರ್ಕಾರದ ವಿರುದ್ದ ಜನಾಕ್ರೋಶ ಯಾತ್ರೆ ಅಂತ ಬೋರ್ಡ್‌ ಹಾಕಿಕೊಳ್ಳಲಿ ಎಂದು ಲೇವಡಿ ಮಾಡಿದರು.

ಬೆಂಗಳೂರಿನಲ್ಲಿ 2ನೇ ಏರ್‌ಪೋರ್ಟ್‌ ನಿರ್ಮಾಣದ ವಿಚಾರವಾಗಿ ಮಾತನಾಡಿ, ಏರ್‌ಪೋರ್ಟ್‌ ವಿಚಾರದಲ್ಲಿ ಯಾರು ನನ್ನ ಜೊತೆ ಚರ್ಚಿಸಿಲ್ಲ. ನಾನು ನಗರದಲ್ಲಿ ಮತ್ತೊಂದು ಏರ್‌ಪೋರ್ಟ್‌ ಆಗಬೇಕು ಎಂದು ಹೇಳಿಲ್ಲ. ರಾಜ್ಯದಲ್ಲಿ ಎಲ್ಲೇ ಏರ್‌ಪೋರ್ಟ್‌ ಮಾಡಿದರೂ ನನಗೆ ಖುಷಿ ಎಂದು ತಿಳಿಸಿದರು.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

7 mins ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

8 mins ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

10 mins ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

13 mins ago

ದಸರಾ ಸಂಭ್ರಮಕ್ಕೆ ಸುಗಮ ಸಂಚಾರದ ಸಾಥ್

ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…

14 mins ago

ಮಳೆಯ ಕೊರತೆ ನಡುವೆಯೂ ಶೇ.75 ಬಿತ್ತನೆ ಸಾಧನೆ

ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕಿನಲ್ಲಿ ಭತ್ತ, ಮುಸುಕಿನ ಜೋಳ ಬೆಳೆಗೆ ರೈತರ ಒತ್ತು  ಕುಶಾಲನಗರ: ಮುಂಗಾರು ಮಳೆಯ ಪ್ರಮಾಣದಲ್ಲಿ ಕೊರತೆ ಕಂಡುಬಂದಿರುವುದರ…

33 mins ago