ರಾಜ್ಯ

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.

ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ. ದಿವಂಗತ ಹೆಚ್.ವೈ.ಮೇಟಿಯವರು ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮವಹಿಸಿದ್ದರು. ಮೇಟಿಯವರು ಎಲ್ಲ ವರ್ಗದವರ ಏಳಿಗೆಗಾಗಿ ಸೇವೆ ಸಲ್ಲಿಸಿದ ಅಜಾತಶತ್ರುವಾಗಿದ್ದರು. ಸರಳ, ಸಜ್ಜನ ಮೇಟಿಯವರ ಅವರ ನಿಧನದಿಂದ ಖಾಲಿಯಾಗಿರುವ ಶಾಸಕ ಸ್ಥಾನಕ್ಕೆ ಅವರ ಮಗನೇ ಆದ ಉಮೇಶ್ ಮೇಟಿಯವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಾಗಲಕೋಟೆಯಲ್ಲಿ ಅವರ ಗೆಲ್ಲುವ ವಿಶ್ವಾಸವಿದೆ ಎಂದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನವರೇ ಆಗಿದ್ದ ಪೈಲ್ವಾನ್ ಸಾದಿಕ್ ಅವರ ಮನವೊಲಿಸಿ ಕಣದಿಂದ ಹಿಂದೆ ಸರಿಯುವಂತೆ ಮಾಡಲಾಗಿದೆ. ಸಚಿವ ಜಮೀರ್ ಅಹ್ಮದ್ ಅವರೂ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಇನ್ನು ಸೋಲಿನ ಭಯದಿಂದ ಸಿಎಂ ಅವರು ಬಾಗಲಕೋಟೆಯಲ್ಲಿ ಹೆಚ್ಚಿನ ಪ್ರಚಾರ ಕೈಗೊಂಡಿದ್ದಾರೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸೋಲಿನ ಭೀತಿಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪ್ರತೀತಿಯಾಗಿದ್ದು, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ ಎಂದರು.

ಸಿಎಂ ಸ್ಥಾನದ ಬಗ್ಗೆ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಪಕ್ಷದ ಹೈಕಮಾಂಡ್ ನಿರ್ಧಾರಗಳಿಗೆ ಬದ್ಧನಾಗಿರುತ್ತೇನೆ. ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಬಿಜೆಪಿಯವರು ತಮ್ಮ ಅವಧಿಯಲ್ಲಿ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಲೀ, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ರೈತರಿಗೆ ಪರಿಹಾರ ನೀಡಲು ಆದ್ಯತೆ ನೀಡಲಿಲ್ಲ. ಬಾಗಲಕೋಟೆಯ ಅಭಿವೃದ್ಧಿಗೆ ಹೆಚ್.ವೈ.ಮೇಟಿಯವರ ಕೊಡುಗೆ ಅನನ್ಯವಾಗಿದೆ ಎಂದರು.

 

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

9 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

9 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

9 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

10 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

10 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

10 hours ago