ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಪಿ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಾಗಿ ಅನುತ್ತೀರ್ಣರಾಗುವ ನಿದರ್ಶನಗಳು ಹಚ್ಚಾಗಿ ಕಂಡು ಬರುವ ಹಿನ್ನಲೆ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಶಿಕ್ಷಣ ಇಲಾಖೆ ಬಂಪರ್ ಆಫರ್ ನೀಡಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ನಡೆಸಲು ನಿರ್ಧರಿಸಿದೆ.
ಕಳೆದ ತಿಂಗಳಷ್ಟೇ ಮೊದಲ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿತ್ತು. ಅದರಲ್ಲಿ ಫೇಲಾದ ವಿದ್ಯಾರ್ಥಿಗಳು ಹಾಗೂ ಇನ್ನು ಹೆಚ್ಚಿನ ಅಂಕ ಗಳಿಸಲು ಬಯಸುವ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಿ ಪಿಯು ಪರೀಕ್ಷೆ-2 ನಡೆಸಲು ನಿರ್ಧರಿಸಿದೆ.
ಪಿಯು ಪರೀಕ್ಷೆ-2 ನ್ನು ಇದೇ ಏ.29 ಮೇ.16 ವರೆಗೆ ನಡೆಯಲಿದ್ದು, ದಾಖಲೆ ಪ್ರಮಾಣದಲ್ಲಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಪರೀಕ್ಷೆಗೆ ಮೊದಲ ಬಾರಿ ಉತ್ತೀರ್ಣರಾಗಿರುವ 32 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದಾರೆ.
ನಾಳೆ (ಸೋಮವಾರ) ಆರಂಭವಾಗಲಿರುವ ಪಿಯುಸಿ ಪರೀಕ್ಷೆ-2 ಗೆ 1,49,300 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಎಲ್ಲಾ ಪರೀಕ್ಷೆಗಳು ನಿಗದಿತ ದಿನದಂದು ಮದ್ಯಾಹ್ನ 2.15 ರಿಂದ ಸಂಜೆ 4.30 ವರೆಗೆ ನಡೆಯಲಿದೆ. ಮತ್ತು ಈ ಪರೀಕ್ಷೆಗೆ ಹಾಲ್ ಟಿಕೆಟ್‌ನ್ನು ಆನ್ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಪರೀಕ್ಷಾ ವೇಳಾಪಟ್ಟಿ
ಏ.29- ಕನ್ನಡ, ಅರೇಬಿಕ್
ಏ.30- ಇತಿಹಾಸ, ಭೌತಶಾಸ್ತ್ರ
ಮೇ.2- ಇಂಗ್ಲಿಷ್
ಮೇ.3- ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ.4- ಭೂಗೋಳ ಶಾಸ್ತ್ರ, ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಗೃಹ ವಿಜ್ಞಾನ, ಮೂಲಗಣಿತ
ಮೇ.9- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಮೇ.11- ಸಮಾಜ ಶಾಸ್ತ್ರ, ಭೂಗರ್ಭಶಾಸ್ತ್ರ, ಜೀವಶಾಸ್ತ್ರ, ವಿದ್ಯನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ.13- ಅರ್ಥಶಾಸ್ತ್ರ
ಮೇ.14- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಮೇ.15- ಹಿಂದಿ
ಮೇ.16- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೆಬಿಕ್, ಫ್ರೆಂಚ್
ಮೇ.17- ಹಿಂದುಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಬ್ಯೂಟಿ ಅಂಡ್ವೆಲ್‌ನೆಸ್, ಆಟೋಮೊಬೈಲ್, ರೀಟೈಲ್
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…