ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1 ನಾಳೆಯಿಂದ(ಮಾರ್ಚ್ 1) ರಾಜ್ಯಾದ್ಯಂತ ಪ್ರಾರಂಭವಾಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಶಿಕ್ಷಣ ಇಲಾಖೆ ಹಿಂದೆಂದಿಗಿಂತಲೂ ಈ ಬಾರಿ ಬಿಗಿ ಕ್ರಮಗಳನ್ನು ತೆಗೆದುಕೊಂಡಿದೆ.
ಪರೀಕ್ಷೆ 1 ಇಂದಿನಿಂದ ಪ್ರಾರಂಭವಾಗಿ ಮಾ.20ರವರೆಗೆ ನಡೆಯಲಿದೆ. ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿರುವ ಶಿಕ್ಷಣ ಇಲಾಖೆ ಇದೇ ಮೊದಲ ಬಾರಿಗೆ ವೆಬ್‌ಕಾಸ್ಟಿಂಗ್ ಕಣ್ಗಾವಲು ವ್ಯವಸ್ಥೆ ಮಾಡಿದೆ. ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವೆಬ್‌ಕ್ಯಾಸ್ಟಿಂಗ್ ವ್ಯವಸ್ಥೆ ಜಾರಿ ಮಾಡಲಾಗಿತ್ತು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೂ ವ್ಯವಸ್ಥೆ ಮಾಡುವ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದೆ. ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.
ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. 3,35,468ಗಂಡು ಮಕ್ಕಳು,3,78,389 ಹೆಣ್ಣು ಮಕ್ಕಳು ಹಾಗೂ ಐವರು ತೃತೀಯ ಲಿಂಗಿಗಳಿದ್ದಾರೆ. ಒಟ್ಟು 1,171ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ 2,342 ಸ್ಥಾನಿಕ ಜಾಗೃತದಳ, 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಮೌಲ್ಯಮಾಪಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…