ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ನಾಳೆ, ಅಂದರೆ ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವುದರಿಂದ, ಮತದಾನದ ಪ್ರಕ್ರಿಯೆಗಳು ಮುಕ್ತಾಯವಾದ ನಂತರ ಸಂಜೆ ವೇಳೆಗೆ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈಗಾಗಲೇ ಅಂಕಪಟ್ಟಿ ಅಪ್‌ಲೋಡ್ ಮಾಡುವ ಎಲ್ಲಾ ತಾಂತ್ರಿಕ ಸಿದ್ಧತೆಗಳನ್ನು ಮಾಡಿಕೊಂಡಿದೆ.
ದ್ವಿತೀಯ ಪಿಯುಸಿ 2026 ಪರೀಕ್ಷೆ 1 ಅನ್ನು ಫೆಬ್ರವರಿ 28 ರಿಂದ ಮಾರ್ಚ್ 17, 2026 ರವರೆಗೆ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026 ಹೊರಬಂದ ನಂತರ, ಕರ್ನಾಟಕ ಮಂಡಳಿಯ ಫಲಿತಾಂಶ 2026 ರಲ್ಲಿ ತಮ್ಮ ಅಂಕಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ದ್ವಿತೀಯ ಪಿಯುಸಿ ಕರ್ನಾಟಕ ಫಲಿತಾಂಶ 2026 ಘೋಷಣೆಯ ನಂತರ ಮರುಮೌಲ್ಯಮಾಪನ ಮತ್ತು ಸ್ಕ್ಯಾನ್ ಮಾಡಿದ ಉತ್ತರ ಪತ್ರಿಕೆಯ ದಿನಾಂಕಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತದೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…