ಬೆಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮುಚ್ಚಳಿಕೆ ಬರೆದುಕೊಡಲು ನಿರಾಕರಿಸಿದ ಕಾರಣಕ್ಕೆ ಮ್ಯಾಜಿಸ್ಟ್ರೇಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಪುನೀತ್‌ಕೆರೆಹಳ್ಳಿ ವಿರುದ್ಧ 14 ಪ್ರಕರಣಗಳಿವೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಬಸವನಗುರಿ ಪೊಲೀಸರು ಬಿಎನ್‌ಎಸ್‌ಎಸ್‌ನ ಸೆಕ್ಷನ್ 127 ರ ಅಡಿಯಲ್ಲಿ ಬಂಧಿಸಿ ಗುರುವಾರ ಬೆಂಗಳೂರು ದಕ್ಷಿಣ ವಿಭಾಗದ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡೆಸಿದ್ದರು.
ಆವಾಗ, ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವುದಿಲ್ಲ ಎಂದು ಬಾಂಡ್ ಹಾಗೂ ಮುಚ್ಚಳಿಕೆ ಬರೆದುಕೊಡಲು ಮ್ಯಾಜಿಸ್ಟ್ರೇಟ್ ಸೂಚಿಸಿದರು. ಆದರೆ, ಇದಕ್ಕೆ ಪುನೀತ್ ಕೆರೆಹಳ್ಳಿಯವರು ನಿರಾಕರಣೆ ಮಾಡಿದರು. ಹೀಗಾಗಿ, ಅವರನ್ನು ಮುಂದಿನ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದರು.
ಪುನೀತ್ ಕೆರೆಹಳ್ಳಿ ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯನ್ನು ನಡೆಸುತ್ತಿದ್ದಾರೆ. ರಾಮನಗರ ಜಿಲ್ಲೆಯಲ್ಲಿ 2023 ರ ಏಪ್ರಿಲ್‌ನಲ್ಲಿ ನಡೆದ ದನ ವ್ಯಾಪಾರಿ ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಈ ಹಿಂದೆ, ಅವರು ಕರ್ನಾಟಕದಲ್ಲಿ ಹಲಾಲ್ ವಸ್ತುಗಳ ವಿರುದ್ಧ ಅಭಿಯಾನ ನಡೆಸಿದ್ದರು. ಹಿಂದೂ ದೇವಾಲಯದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ನಿಷೇಧಿಸುವಂತೆ ಒತ್ತಾಯಿಸಿದ್ದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…