ರಾಜ್ಯಮಟ್ಟದ ಅಂಚೆಗಳ ಚೀಟಿಗಳ ಮಹಾ ಪ್ರದರ್ಶನದ ಅಂಗವಾಗಿ ಇಂದಿನಿಂದ ( ಜನವರಿ 5 ) 8ರವರೆಗೆ 13ನೇ ಕರ್ನಾಪೆಕ್ಸ್ ಅಂಚೆ ಚೀಟಿಗಳ ಹಬ್ಬವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮ ಕಂಠೀರಣ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇಂದು ಚಾಲನೆ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ಅಂಚೆ ಚೀಟಿ ಬಿಡುಗಡೆ ಮಾಡಲಾಯಿತು ಹಾಗೂ ಅಂಚೆ ಇಲಾಖೆಯ ಮೊಬೈಲ್ ಅಪ್ಲಿಕೇಶನ್ ಅನ್ನೂ ಸಹ ಬಿಡುಗಡೆ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಆಗಮಿಸಿದ್ದರು. ಶಾಸಕರಾದ ರಿಜ್ವಾನ್ ಅರ್ಷದ್, ಎನ್ ಎ ಹ್ಯಾರೀಸ್ ಹಾಗೂ ಎಲ್ ಕೆ ದಾಸ್ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದರು.