ರಾಜ್ಯ

ಹಸುಗಳ ಕೆಚ್ಚಲು ಕೊಯ್ದವರಿಗೆ ಶಿಕ್ಷೆ: ಸಿಎಂ ಸಿದ್ದರಾಮಯ್ಯ

ವಿಜಯನಗರ: ಹಸುಗಳ ಕೆಚ್ಚಲು ಕೊಯ್ದಿರುವ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ತರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್‌ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಆದರೆ ರಾಜ್ಯದ ಬಿಜೆಪಿ ನಾಯಕರು ಸೇರಿದಂತೆ ಹಿಂದೂ ಪರ ಸಂಘಟನೆಗಳು ಈ ಘಟನೆಯನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದರು.

ಇನ್ನು ಜಾತಿಗಣತಿ ವರದಿ ಜಾರಿ ವಿರೋಧ ಕುರಿತು ಮಾತನಾಡಿದ ಅವರು, ಜಾತಿಗಣತಿ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ತಯಾರಾಗಿರುವ ಜಾತಿಗಣತಿ ವರದಿ ಜಾರಿಯ ಬಗ್ಗೆ ಸಚಿವ ಸಂಪುಟದಲ್ಲಿ ಮಂಡಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಚಿವೆ ಹೆಬ್ಬಾಳಕರ್‌ ಗೃಹಲಕ್ಷ್ಮಿ ರೂವಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಅತ್ಯಂತ ದೊಡ್ಡ ಯೋಜನೆಯಾಗಿದ್ದು, ಇದನ್ನು ಜಾರಿಗೆ ತರುವಲ್ಲಿ ಸಚಿವೆ…

5 mins ago

ಚೀನಾದಲ್ಲಿ HMPV ಸೋಂಕಿನ ಪ್ರಮಾಣ ಇಳಿಕೆ

ಬೀಜಿಂಗ್:‌ ಉತ್ತರ ಚೀನಾದಲ್ಲಿ ಎಚ್‌ಎಂಪಿವಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ ಎಂದು ಅಲ್ಲಿನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಭಾನುವಾರ…

10 mins ago

ಕುಮಾರಸ್ವಾಮಿಯನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ದೇವೇಗೌಡ

ಬೆಂಗಳೂರು:  ಜೆಡಿಎಸ್ ಪಕ್ಷ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ…

31 mins ago

ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಇಂದು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ಇಂತಹ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಸಿಎಂ ಸಿದ್ದರಾಮಯ್ಯ…

43 mins ago

ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ; ಕೇಂದ್ರ ಸಚಿವ ಎಚ್‌ಡಿಕೆ ಆಗ್ರಹ

ಈ ಘಟನೆ ಅತ್ಯಂತ ಹೇಯ, ವಿಕೃತಿ, ರಾಕ್ಷಸಿ ಕೃತ್ಯ ಎಂದ ಸಚಿವರು ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕುಯ್ದಿರುವ…

56 mins ago

ಜಾತಿಗಣತಿ; ಸಿಎಂ ವಿರುದ್ಧ ಎಚ್‌ಡಿಕೆ ಕಿಡಿ

ಬೆಂಗಳೂರು:  ರಾಜ್ಯದಲ್ಲಿ ಈಗಾಗಲೇ ಆಗಿರುವ ಜಾತಿಗಣತಿ ವರದಿ ದೋಷಪೂರಿತವಾಗಿದೆ. ಗಣತಿ ಆಗಿ ಹತ್ತು ವರ್ಷಗಳು ಮೀರಿದೆ. ಹೀಗಾಗಿ ರಾಜ್ಯ ಜಾತಿಗಣತಿ…

1 hour ago