ನವದೆಹಲಿ: ಕೆ.ಎನ್.ರಾಜಣ್ಣ ಅವರು ಸತ್ಯ ಹೇಳಿದ್ದಕ್ಕೆ ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ದುರಹಂಕಾರದಿಂದ ರಾಜಣ್ಣರನ್ನು ಸಂಪುಟದಿಂದ ಹೊರ ಹಾಕಲಾಗಿದೆ.
ರಾಜಣ್ಣ ಸತ್ಯ ಹೇಳಿದ್ದಕ್ಕೆ ಈ ಶಿಕ್ಷೆಯಾಗಿದೆ. ನಾವು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕೆಂದು ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದರು.
ಕರ್ನಾಟಕದಲ್ಲಿ ಚುನಾವಣೆ ತಯಾರಿ ವೇಳೆ ಕಾಂಗ್ರೆಸ್ ಸರ್ಕಾರವೇ ಇತ್ತು. ಲೋಕಸಭಾ ಚುನಾವಣೆ ತಯಾರಿ ನಡೆದಾಗಲೂ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸುತ್ತಿತ್ತು. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿಲ್ಲ ಅಂದರೆ ಪರಿಶೀಲನೆ ಮಾಡಬೇಕಿತ್ತು ಎಂದು ರಾಜಣ್ಣ ಹೇಳಿದ್ದಾರೆ. ರಾಜೀನಾಮೆ ಕೇಳದೇ ರಾಜಣ್ಣ ಅವರನ್ನು ಸಂಪುಟದಿಂದ ಹೊರದಬ್ಬಿದ್ದಾರೆ. ಇದಕ್ಕೆಲ್ಲಾ ಕಾರಣ ರಾಹುಲ್ ಗಾಂಧಿ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…