Mysore
23
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ಪುತ್ತೂರು ನಗರಸಭಾ ಸದಸ್ಯ ರಮೇಶ್‌ ರೈ ಮೃತದೇಹ ಪತ್ತೆ

ಮಂಗಳೂರು: ಪುತ್ತೂರು ನಗರಸಭಾ ಸದಸ್ಯರ ರಮೇಶ್‌ ರೈ ಮೃತದೇಹ ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಪತ್ತೆಯಾಗಿದೆ.

ರಮೇಶ್‌ ರೈ ಕಳೆದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈಗ ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇವರು ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು.

ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ರಮೇಶ್‌ ರೈರನ್ನು ಯಾರೋ ಕೊಲೆಮಾಡಿ ಟ್ಯಾಂಕ್‌ಗೆ ಎಸೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!