ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಕನ್ನಡಪರ ಹೋರಾಟಗಾರ ಪಿವಿ ನಾರಾಯಣ ಅವರ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ʼಎಕ್ಸ್ʼ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.
ಪಿವಿ ನಾರಾಯಣ ಅವರ ಅಗಲಿಕೆಯಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆಗೆ ಕನ್ನಡ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ನಾರಾಯಣ ಅವರ ನಿಧನ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಬರೆದುಕೊಂಡಿದ್ದಾರೆ.





