ರಾಜ್ಯ

ಗುಣಮಟ್ಟದ ಕಾಮಗಾರಿಗಳು ಸರ್ಕಾರದ ಮೇಲಿನ ವಿಶ್ವಾಸ ಹೆಚ್ಚಿಸುತ್ತವೆ: ಸಚಿವ ಎನ್.ಎಸ್.ಭೋಸರಾಜು

ಬೆಂಗಳೂರು: ಸರ್ಕಾರದ ವತಿಯಿಂದ ಕೈಗೊಳ್ಳುವ ಕಾಮಗಾರಿಗಳು ಉತ್ತಮ ಗುಣಮಟ್ಟದ್ದಾಗಿದ್ದರೆ, ಲಕ್ಷಾಂತರ ಜನರ ಸಮಸ್ಯೆಗೆ ಪರಿಹಾರ ಒದಗಿಸುತ್ತದೆ. ಹಾಗೆಯೇ ಸರ್ಕಾರದ ಮೇಲಿನ ವಿಶ್ವಾಸವನ್ನು ಹೆಚ್ಚಿಸುತ್ತವೆ. ಈ ನಿಟ್ಟಿನಲ್ಲಿ ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಸಣ್ಣ ನೀರಾವರಿ ಇಲಾಖೆಗೆ ಇಂಜಿನಿಯರ್‌ಗಳಿಗೆ ಸಚಿವ ಎಸ್.ಎನ್.ಭೋಸರಾಜು ನಿರ್ದೇಶನ ನೀಡಿದರು.

ಬೆಂಗಳೂರು ನಗರದ ಇನ್ಸಿಟ್ಯೂಟ್‌ ಆಫ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಟೆಕ್ನಿಕಲ್‌ ವರ್ಕ್‌ಶಾಪ್‌ ಆನ್‌ ಕ್ವಾಲಿಟಿ ಮಾನಿಟರಿಂಗ್‌ ವರ್ಕ್‌ಶಾಪ್‌ ಫಾರ್‌ ಇರಿಗೇಷನ್‌ ಇಂಜಿನಿಯರ್ಸ್‌ಗೆ ಚಾಲನೆ ನೀಡಿ ಮಾತನಾಡಿದರು.

ಯಾವುದೇ ಕ್ಷೇತ್ರದಲ್ಲಾಗಲಿ ಗುಣಮಟ್ಟ ಬಹಳ ಪ್ರಾಮುಖ್ಯತೆಯನ್ನು ವಹಿಸುತ್ತದೆ. ಅದು ತಿನ್ನುವ ಆಹಾರವಿರಲಿ ಅಥವಾ ಬಳಸುವ ಔಷಧಿಯಾಗಿರಲಿ ಗುಣಮಟ್ಟ ಬಹಳ ಮುಖ್ಯ ಎಂದರು.

ದೇಶದಲ್ಲಿ ಶೇ.70ರಷ್ಟು ಜನರು ಕೃಷಿ ಮೇಲೆ ಅವಲಂಬಿತರಾಗಿದ್ದಾರೆ. ಇವರಿಗೆ ಶಕ್ತಿ ನೀಡುವ ನಿಟ್ಟಿನಲ್ಲಿ ನೀರಾವರಿ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಮಾಹಿತಿ ನೀಡಿದರು.

ಎರಡು ದಿನಗಳ ಕಾಲ ನಡೆಯಲಿರುವ ಕಾರ್ಯಾಗಾರದಲ್ಲಿ ತಮ್ಮ ಚರ್ಚೆಗಳು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ರೈತರ ಹಿತದೃಷ್ಟಿಯಿಂದ ಸರ್ಕಾರ ಕೈಗೊಳ್ಳುವ ನೀರಾವರಿ ಯೋಜನೆಗಳಲ್ಲಿ ಪ್ರಾಮಾಣಿಕತೆಯಿಂದ ಗುಣಮಟ್ಟದಿಂದ ಕೂಡಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಸೂಚನೆ ನೀಡಿದರು.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

2 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

4 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

4 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

4 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

6 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

7 hours ago