ಬೆಂಗಳೂರು: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದರು.
ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗನೆ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
ಘಟಪ್ರಭಾ ನದಿಯ ಪ್ರವಾಹದಿಂದಾಗಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 34639 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 2019 ರಲ್ಲಿ 15088 ಹೆಕ್ಟೇರ್, 2021ರಲ್ಲಿ 7051 ಹೆಕ್ಟೇರ್ ಮತ್ತು 2024 ರಲ್ಲಿ 12500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದೆ. ಇದಕ್ಕೆ ಸೂಕ್ತ ಬೆಳೆ ಪರಿಹಾರ ಹಾಗೂ ಶಾಶ್ವತ ಪರಿಹಾರ ಒದಗಿಸಬೇಕು ಎಂದು ರೈತರ ನಿಯೋಗ ಮನವಿ ಮಾಡಿತು.
ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನೀರಾವರಿ ಕ್ಷೇತ್ರದ ಕಬ್ಬಿನ ಬೆಳೆಗೆ ಪ್ರತಿ ಹೆಕ್ಟೇರಿಗೆ ರೂ. 22,500 ರಂತೆ ಪರಿಹಾರ ಧನ ನಿಗದಿಪಡಿಸಲಾಗಿದ್ದು, ಇತರ ಬೆಳೆಗಳಿಗೆ ರೂ. 17000 ನಿಗದಿಪಡಿಸಲಾಗಿದೆ. ಇದರಿಂದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ.
ಈಗಾಗಲೇ ಕೃಷಿ ವಿಶ್ವವಿದ್ಯಾಲಯ ಕರ್ನಾಟಕದ ಕಬ್ಬು ಬೆಳೆಯಲು ತಗಲುವ ವೆಚ್ಚ ಪ್ರತಿ ಹೆಕ್ಟೇರ್‌ಗೆ 1.50 ಲಕ್ಷ ರೂ. ನಿಗದಿಪಡಿಸಿದ್ದು, ಇದು ಸಹ ಅವೈಜ್ಞಾನಿಕವಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕನಿಷ್ಟವಾಗಿದ್ದು, ಪ್ರತಿ ಎಕರೆ ಕಬ್ಬು ಬೆಳೆಗೆ ರೂ. 1 ಲಕ್ಷ ಹಾಗೂ ಇತರ ಬೆಳೆಗಳಿಗೆ ರೂ.50 ಸಾವಿರ ಪರಿಹಾರವನ್ನು ನೀಡಬೇಕು.
ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ಮಾನದಂಡಗಳನ್ನು ಪರಿಗಣಿಸದೆ ಹಾನಿಗೊಳಗಾದ ಎಲ್ಲಾ ಕ್ಷೇತ್ರಕ್ಕೂ ಪರಿಹಾರ ಧನವನ್ನು ನೀಡಬೇಕು ಎಂದು ರೈತರು ಮನವಿ ಸಲ್ಲಿಸಿದರು.
ಅಬಕಾರಿ ಸಚಿವ ಆರ್. ಬಿ.ತಿಮ್ಮಾಪುರ ಮತ್ತಿತರರು ಉಪಸ್ಥಿತರಿದ್ದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…