ಬೆಂಗಳೂರು: ಗುತ್ತಿಗೆಯಲ್ಲಿ ಯಾವುದೇ ಧರ್ಮ ಆಧಾರಿತ ಗುತ್ತಿಗೆ ಇರುವುದಿಲ್ಲ. ಕರ್ನಾಟಕದಲ್ಲಿ ಮೊದಲ ಬಾರಿಗೆ ಮೀಸಲಾತಿ ತರುವ ಮೂಲಕ ಧರ್ಮಧರ್ಮಗಳ ಮಧ್ಯೆ ಒಡಕು ಉಂಟು ಮಾಡಲು ಕಾಂಗ್ರೆಸ್ ಪಕ್ಷದವರು ಮುಂದಾಗಿದೆ. ಮತಗಳಿಕೆಗಾಗಿ ನಾವು ಏನು ಬೇಕಾದರೂ ಮಾಡುತ್ತೇವೆ ಎಂಬ ಸರ್ವಾಧಿಕಾರಿಯ ಧೋರಣೆ ವಿರುದ್ಧ ನಮ್ಮ ಹೋರಾಟ ಅನಿವಾರ್ಯ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮತ್ತೆ ಮುಸ್ಲಿಮರ ಓಲೈಕೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ನಾವೆಲ್ಲ ದಲಿತರಿಗೆ ಹೆಚ್ಚು ಆದ್ಯತೆ ಕೊಡಬೇಕು. ಜೀವನಮಟ್ಟ ಹೆಚ್ಚಿಸಲು ಹೆಚ್ಚಿಸೋಕೆ ಮೀಸಲಾತಿ ನೀಡಬೇಕು ಎಂದು ಡಾ.ಅಂಬೇಡ್ಕರ್ ಸಂವಿಧಾನದಲ್ಲಿ ಉಲ್ಲೇಖ ಮಾಡಿದ್ದರು. ಅದರ ಪ್ರಕಾರ ದಲಿತರಿಗೆ ಸಂವಿಧಾನ ಹಕ್ಕನ್ನು ಕೊಟ್ಟಿದ್ದಾರೆ. ಆದರೆ, ಕಾಂಗ್ರೆಸ್‌ನವರು ಮುಸ್ಲಿಮರು ತಮಗೆ ಮತ ಹಾಕುತ್ತಾರೆ ಎಂಬ ಕಾರಣಕ್ಕಾಗಿ ಮೀಸಲಾತಿ ತರಲು ಹೊರಟಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಲಾಲಸೆಗೋಸ್ಕರ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿ ನೀಡಿ ಸಂವಿಧಾನ ಉಲ್ಲಂಘನೆ ಮಾಡಿದ್ದಾರೆ. ಸಂವಿಧಾನದಲ್ಲಿ ಯಾವುದೇ ರೀತಿಯ ಧರ್ಮಾಧಾರಿತ ಮೀಸಲಾತಿ ಇಲ್ಲ. ಹಲವಾರು ಸುಪ್ರೀಂಕೋರ್ಟ್ ತೀರ್ಮಾನಗಳು ಬಂದಿವೆ. ಇಷ್ಟಿದ್ದರೂ ಕೂಡಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೋಪಿ ಹಾಕಿದ್ದು ಆಯಿತು. ಟಿಪ್ಪು ಜಯಂತಿ ಮಾಡಿದ್ದೂ ಆಯಿತು, ಶಾದಿ ಭಾಗ್ಯ ಆಯಿತು ಎಂದು ಟೀಕಾ ಪ್ರಹಾರ ನಡೆಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…