ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಕಮಿಷನ್ ದಾಹ ಮಿತಿಮೀರಿದೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ. ಜಿಎಸ್ಟಿ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದು ಅನಿವಾರ್ಯ ಎಂದು ಗುತ್ತಿಗೆದಾರರು ಅಳಲು ತೋಡಿಕೊಂಡಿದ್ದಾರೆ. ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ? ಎಂದು ಪ್ರಶ್ನೆ ಮಾಡಿದರು.
ಇನ್ನು ಸುಳ್ಳು, ಅಪ ಪ್ರಚಾರ, ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್ ಪಕ್ಷ, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ, 36 ಸೀಟೂ ಬರುವುದಿಲ್ಲ. ಇದು ನನ್ನ ಗ್ಯಾರಂಟಿ ಎಂದು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…