ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾಹಲ ನಡೆಯುತ್ತಿದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮಗೆ ಸಂಬಂಧವೇ ಇಲ್ಲದಂತೆ ಚೆನ್ನೈ ಪ್ರವಾಸ ಕೈಗೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಇಡೀ ಕಾಂಗ್ರೆಸ್ ಸರ್ಕಾರವೇ ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿರುವಾಗ ಪಾರ್ಟ್ ಟೈಂ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರು ತಮಗೆ ಸಂಬಂಧವೇ ಇಲ್ಲದಂತೆ ಚೆನ್ನೈ ಪ್ರವಾಸ ಕೈಗೊಂಡಿದ್ದಾರೆ. ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ತಾವು ಚೆನ್ನೈ ಪ್ರವಾಸ ಕೈಗೊಂಡಿರುವುದು ಯಾವ ಪುರುಷಾರ್ಥಕ್ಕಾಗಿ? ಎಂದು ವಾಗ್ದಾಳಿ ನಡೆಸಿದ್ದಾರೆ.
ಮರೀನಾ ಬೀಚ್ ನಲ್ಲಿ ಪಾದಯಾತ್ರೆ ಮಾಡಿ ಮೇಕೆದಾಟು ಯೋಜನೆಗೆ NOC ನೀಡುವಂತೆ ತಮಿಳುನಾಡು ಸಿಎಂ ಸ್ಟಾಲಿನ್ ಅವರ ಮೇಲೆ ಒತ್ತಡ ಹೇರುತ್ತೀರಾ?, ಮೇಕೆದಾಟು ಯೋಜನೆಗೆ ಅವಕಾಶ ಕೊಡುವುದಿಲ್ಲ ಎಂದು ಖಡಾಖಂಡಿತವಾಗಿ ತಮ್ಮ ಪ್ರಣಾಳಿಕೆಯಲ್ಲಿ ಹೇಳಿರುವ ಡಿಎಂಕೆ ಪಕ್ಷದ ನಾಯಕರ ನಟ್ಟು-ಬೋಲ್ಟು ಟೈಟು ಮಾಡುತ್ತೀರಾ? ಅಥವಾ ತಮಿಳುನಾಡು ಸಿಎಂ ಸ್ಟಾಲಿನ್ ಅವರನ್ನ ಕೆ.ಆರ್.ಎಸ್ ನಲ್ಲಿ ಕಾವೇರಿ ಆರತಿಗೆ ಆಹ್ವಾನಿಸಿ, ಕಾವೇರಿ ನೀರನ್ನ ಕೊಳ್ಳೆ ಹೊಡೆದು ಕನ್ನಡಿಗರ ಹಿತಾಸಕ್ತಿಗೆ ಕೊಳ್ಳಿ ಇಡುತ್ತೀರಾ?
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…