ಬೆಂಗಳೂರು: ವಿದೇಶಾಂಗ ನೀತಿಯಿಂದ ಹಿಡಿದು ಮಿಲಿಟರಿ ತಂತ್ರಗಾರಿಕೆವರೆಗೆ ಎಲ್ಲದರ ಬಗ್ಗೆ ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ಪ್ರಿಯಾಂಕ್ ಖರ್ಗೆ ಅವರಿಗೆ ಕಲ್ಯಾಣ ಕರ್ನಾಟಕದ ಹಳ್ಳಿಗಳ ಜನ ಬಸ್ಸಿಲ್ಲದೆ ದುಪ್ಪಟ್ಟು ಬೆಲೆ ತೆತ್ತು ಸ್ವಂತ ಗಾಡಿ, ಟಂಟಂ, ಜೀಪಿನಲ್ಲಿ ಪ್ರಯಾಣ ಮಾಡುವುದು ಕಾಣುತ್ತಿಲ್ಲವೇ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಇದನ್ನು ಓದಿ: ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಎಐ ಡ್ರೋನ್ ಕ್ಯಾಮರಾ ಅಳವಡಿಕೆ
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕಲ್ಯಾಣ ಕರ್ನಾಟಕದ ಜನರ ಮತ ಪಡೆದು, ಅಧಿಕಾರ ಅನುಭವಿಸಿ ತಮ್ಮ ಕುಟುಂಬದ ಕಲ್ಯಾಣ ಮಾಡಿಕೊಂಡಿರುವುದೇ ನಿಮ್ಮ ಏಕೈಕ ಸಾಧನೆ.
ಆರ್‌ಎಸ್‌ಎಸ್ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟು ನಿಮ್ಮ ಈ ವೈಫಲ್ಯಗಳನ್ನು ಮರೆಮಾಚಬಹುದು, ಜನರನ್ನು ಯಾಮಾರಿಸಬಹುದು ಎಂದು ಕನಸು ಕಾಣಬೇಡಿ. ಕಲ್ಯಾಣ ಕರ್ನಾಟಕದ ಜನ ಖರ್ಗೆ ಕುಟುಂಬವನ್ನು ಮತ್ತು ಕಾಂಗ್ರೆಸ್ ಪಕ್ಷವನ್ನ ನಿಷೇಧ ಮಾಡುವ ದಿನ ಬಹಳ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.





