ರಾಜ್ಯ

ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಆರ್.‌ಅಶೋಕ್‌ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು: ವಿದೇಶಾಂಗ ನೀತಿಯಿಂದ ಹಿಡಿದು ಮಿಲಿಟರಿ ತಂತ್ರಗಾರಿಕೆವರೆಗೆ ಎಲ್ಲದರ ಬಗ್ಗೆ ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ಪ್ರಿಯಾಂಕ್‌ ಖರ್ಗೆ ಅವರಿಗೆ ಕಲ್ಯಾಣ ಕರ್ನಾಟಕದ ಹಳ್ಳಿಗಳ ಜನ ಬಸ್ಸಿಲ್ಲದೆ ದುಪ್ಪಟ್ಟು ಬೆಲೆ ತೆತ್ತು ಸ್ವಂತ ಗಾಡಿ, ಟಂಟಂ, ಜೀಪಿನಲ್ಲಿ ಪ್ರಯಾಣ ಮಾಡುವುದು ಕಾಣುತ್ತಿಲ್ಲವೇ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಇದನ್ನು ಓದಿ: ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಎಐ ಡ್ರೋನ್‌ ಕ್ಯಾಮರಾ ಅಳವಡಿಕೆ

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕಲ್ಯಾಣ ಕರ್ನಾಟಕದ ಜನರ ಮತ ಪಡೆದು, ಅಧಿಕಾರ ಅನುಭವಿಸಿ ತಮ್ಮ ಕುಟುಂಬದ ಕಲ್ಯಾಣ ಮಾಡಿಕೊಂಡಿರುವುದೇ ನಿಮ್ಮ ಏಕೈಕ ಸಾಧನೆ.

ಆರ್‌ಎಸ್‌ಎಸ್ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟು ನಿಮ್ಮ ಈ ವೈಫಲ್ಯಗಳನ್ನು ಮರೆಮಾಚಬಹುದು, ಜನರನ್ನು ಯಾಮಾರಿಸಬಹುದು ಎಂದು ಕನಸು ಕಾಣಬೇಡಿ. ಕಲ್ಯಾಣ ಕರ್ನಾಟಕದ ಜನ ಖರ್ಗೆ ಕುಟುಂಬವನ್ನು ಮತ್ತು ಕಾಂಗ್ರೆಸ್‌ ಪಕ್ಷವನ್ನ ನಿಷೇಧ ಮಾಡುವ ದಿನ ಬಹಳ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

3 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

3 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

4 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

5 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

10 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

11 hours ago