Mysore
29
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಗೌರವದಿಂದ ಕುರ್ಚಿ ತ್ಯಾಗ ಮಾಡುವುದು ನಿಮಗೂ ಒಳಿತು, ರಾಜ್ಯಕ್ಕೂ ಒಳಿತು: ಆರ್.‌ಅಶೋಕ್‌

ಬೆಂಗಳೂರು: ಸಮಾವೇಶದ ವೇಳೆ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಮನನೊಂದು ಎಸ್‌ಪಿ ಅವರು ರಾಜೀನಾಮೆಗೆ ಮುಂದಾಗಿದ್ದು, ಈ ಸಂಬಂಧ ಸಿಎಂ ಸಿದ್ದು ವಿರುದ್ಧ ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಸಿಎಂ ಸಿದ್ದರಾಮಯ್ಯನವರೇ ನೀವು ಬಹಿರಂಗ ವೇದಿಕೆಯ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ಮದವೋ, ದುರಹಂಕಾರವೋ, ವಿಫಲ ಸರ್ಕಾರ ಮುನ್ನಡೆಸುತ್ತಿರುವ ಹತಾಶೆಯೋ ಅಥವಾ ಇಷ್ಟರಲ್ಲೇ ಅಧಿಕಾರ ಬಿಟ್ಟುಕೊಡಬೇಕು ಎನ್ನುವ ಕಾತುರವೋ ಅದನ್ನ ನಿಮ್ಮ ಆತ್ಮಾವಲೋಕನಕ್ಕೆ ಬಿಡುತ್ತೇನೆ.

ಆದರೆ ನಿಮ್ಮ ನಡೆಯಿಂದ ಒಬ್ಬ ಕರ್ತವ್ಯನಿಷ್ಠ ಅಧಿಕಾರಿಯ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಇಡೀ ಪೊಲೀಸ್ ಇಲಾಖೆಯ ಮನೋಬಲಕ್ಕೆ ಚ್ಯುತಿ ತಂದಿದೆ. ಅಧಿಕಾರಶಾಹಿಯ ನೈತಿಕತೆಗೆ ಪೆಟ್ಟು ಕೊಟ್ಟಿದೆ. ನೌಕರಶಾಹಿಯ ಆತ್ಮಸ್ಥೈರ್ಯ ಕುಸಿದಿದೆ.

ನಿಮ್ಮ ಯಡವಟ್ಟುಗಳಿಂದ ಪ್ರತಿ ದಿನ ಒಂದಲ್ಲ ಒಂದು ಒಂದು ರೀತಿ ತಮ್ಮ ಸರ್ಕಾರಕ್ಕೆ, ವೈಯಕ್ತಿಕವಾಗಿ ತಮಗೆ ಕೆಟ್ಟ ಹೆಸರು ಬರುತ್ತಲೇ ಇದೆ. ಇನ್ನಾದರೂ ಈ ಭಂಡ ಬಾಳು ಬಿಡಿ. ಅಧಿಕಾರದ ವ್ಯಾಮೋಹ ಬಿಟ್ಟು ರಾಜೀನಾಮೆ ಕೊಟ್ಟು ಇರುವ ಅಲ್ಪ ಸ್ವಲ್ಪ ಗೌರವವನ್ನಾದರೂ ಉಳಿಸಿಕೊಳ್ಳಿ. ನಿವೃತ್ತಿಯ ಅಂಚಿನಲ್ಲಿ ಖಳನಾಯಕನಾಗಿ ಇತಿಹಾಸದ ಪುಟ ಸೇರುವುದಕ್ಕಿಂತ, ಗೌರವದಿಂದ ಕುರ್ಚಿ ತ್ಯಾಗ ಮಾಡುವುದು ನಿಮಗೂ ಒಳಿತು, ರಾಜ್ಯಕ್ಕೂ ಒಳಿತು ಎಂದು ಆಗ್ರಹಿಸಿದ್ದಾರೆ.

Tags:
error: Content is protected !!