Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಬಿಹಾರದಲ್ಲೂ ಹೀನಾಯ ಸೋಲಿನ ಮುನ್ಸೂಚನೆ ಸಿಕ್ಕಿದೆಯೇ?: ರಾಹುಲ್‌ ಗಾಂಧಿಗೆ ಆರ್.‌ಅಶೋಕ್‌ ಪ್ರಶ್ನೆ

R AShok

ಬೆಂಗಳೂರು: ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‍ ಗಾಂಧಿ ಕರ್ನಾಟಕಕ್ಕೆ ಯಾವ ಮುಖ ಇಟ್ಟುಕೊಂಡು ಬರುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಹುಲ್ ಗಾಂಧಿ, ಕಾಂಗ್ರೆಸ್ ಹಾಗೂ ಆಡಳಿತಾರೂಢ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಕಳೆದ 24 ತಿಂಗಳಲ್ಲಿ 2,000 ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾದಾಗ ಬರಲಿಲ್ಲ. ಇಷ್ಟಕ್ಕೂ ನಿಮಗೆ ಕರ್ನಾಟಕ ಈಗ ನೆನಪಾಯಿತೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೈಲಾಗದವನು ಮೈಪರಚಿಕೊಂಡ ಎಂಬಂತೆ ಕೈಲಾಗದ ರಾಹುಲ್ ಗಾಂಧಿ ಚುನಾವಣಾ ಪ್ರಕ್ರಿಯೆ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ! ಮೂರು ಲೋಕಸಭಾ ಚುನಾವಣೆಗಳಲ್ಲಿ ಮೂರಂಕಿ ದಾಟಲಾಗದೆ ಕಾಶ್ಮೀರದಿಂದ ಕನ್ಯಾ ಕುಮಾರಿವರೆಗೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಮುಳುಗಿಸಿ ಸೋತು ಸುಣ್ಣವಾಗಿರುವ ಬಾಲಕ ಬುದ್ಧಿ ರಾಹುಲ್ ಗಾಂಧಿ ಅವರು ಈಗ ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ಮಾಡುತ್ತಾರಂತೆ ಎಂದು ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿ ಅವರೇ, ಯಾವ ಪುರುಷಾರ್ಥಕ್ಕಾಗಿ ಈ ಪಾದಯಾತ್ರೆ? ಹರಿಯಾಣ, ಮಹಾರಾಷ್ಟ್ರ, ದೆಹಲಿ ನಂತರ ಈಗ ಬಿಹಾರದಲ್ಲೂ ಹೀನಾಯ ಸೋಲಿನ ಮುನ್ಸೂಚನೆ ಸಿಕ್ಕಿದೆಯೇ? ಎಂದು ಮರು ಪ್ರಶ್ನೆ ಮಾಡಿದ್ದಾರೆ.

Tags:
error: Content is protected !!