ಬೆಂಗಳೂರು: ಕೊಲೆಗೆ ಕೊಲೆ ಎಂಬ ಮನಸ್ಥಿತಿ ಸರಿಯಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣ ಹಾಗೂ ಗಲಾಟೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಕೈಚೆಲ್ಲಿ ಕುಳಿತಿದೆ. ರಾಜ್ಯದಲ್ಲಿ ಲವ್ ಜಿಹಾದ್‌ಗಳು ನಡೆಯುತ್ತಿವೆ. ಕರಾವಳಿ ಭಾಗದಲ್ಲಂತೂ ಭಯೋತ್ಪಾದನೆ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸರ್ಕಾರ ಕಾನೂನು ಜಾರಿಗೆ ತರುವ ಬದಲು ಯಾರನ್ನೋ ಓಲೈಕೆ ಮಾಡಲು ಮುಂದಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.





