ಬೆಂಗಳೂರು: ವಿಧಾನಸಭೆಯ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಸ್ಪೀಕರ್ ಯುಟಿ ಖಾದರ್ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ ಬರೆದು ಮನವಿ ಮಾಡಿದ್ದಾರೆ.
ವಿಧಾನಸಭೆ ಅಧಿವೇಶನದ ವೇಳೆ ಗಲಾಟೆ ಮಾಡಿ ಸ್ಪೀಕರ್ ಪೀಠಕ್ಕೆ ಆಗೌರವ ತೋರಿದ್ದಾರೆಂದು ಸ್ಪೀಕರ್ ಯುಟಿ ಖಾದರ್ ಅವರು ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಸದನದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದರು.
ಈ ಸಂಬಂಧ ಸ್ಪೀಕರ್‌ಗೆ ಪತ್ರ ಬರೆದಿರುವ ಆರ್. ಅಶೋಕ್ ಅವರು, ರಾಜ್ಯದ ಉಭಯ ಸದನಗಳು ಪ್ರಜಾಪ್ರಭುತ್ವದ ಅತ್ಯುನ್ನತ ಸ್ಥಳಗಳಾಗಿವೆ. ಈ ಸ್ಥಳದಲ್ಲಿ ಸ್ಪೀಕರ್ ಸ್ಥಾನವೂ ಅಷ್ಟೇ ಪ್ರಮುಖವಾಗಿದೆ. ಅಂದು ಮಾರ್ಚ್ 21 ರಂದು ನಡೆದಿರುವ ಘಟನೆ ಉದ್ದೇಶ ಪೂರ್ವಕವಾಗಿ ಆಗಿರುವುದಲ್ಲ. ನಿಮ್ಮ ಬಗ್ಗೆ ಅಪಾರ ಗೌರವವಿದೆ. ಜನ ಸಾಮಾನ್ಯರ ಹಿತದೃಷ್ಠಿಯಿಂದ 18 ಬಿಜೆಪಿ ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಿರಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.