ರಾಜ್ಯ

ಶಾಸಕರ ಅಮಾನತು ವಾಪಸ್‌ ಪಡೆಯುವಂತೆ ಸ್ಪೀಕರ್‌ಗೆ ಮನವಿ ಮಾಡಿದ‌ ಆರ್.ಅಶೋಕ್‌

ಬೆಂಗಳೂರು: ವಿಧಾನಸಭೆಯ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಸ್ಪೀಕರ್‌ ಯುಟಿ ಖಾದರ್‌ ಅವರಿಗೆ ವಿಪಕ್ಷ ನಾಯಕ ಆರ್‌.ಅಶೋಕ್‌ ಪತ್ರ ಬರೆದು ಮನವಿ ಮಾಡಿದ್ದಾರೆ.

ವಿಧಾನಸಭೆ ಅಧಿವೇಶನದ ವೇಳೆ ಗಲಾಟೆ ಮಾಡಿ ಸ್ಪೀಕರ್‌ ಪೀಠಕ್ಕೆ ಆಗೌರವ ತೋರಿದ್ದಾರೆಂದು ಸ್ಪೀಕರ್‌ ಯುಟಿ ಖಾದರ್‌ ಅವರು ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಸದನದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಈ ಸಂಬಂಧ ಸ್ಪೀಕರ್‌ಗೆ ಪತ್ರ ಬರೆದಿರುವ ಆರ್‌. ಅಶೋಕ್‌ ಅವರು, ರಾಜ್ಯದ ಉಭಯ ಸದನಗಳು ಪ್ರಜಾಪ್ರಭುತ್ವದ ಅತ್ಯುನ್ನತ ಸ್ಥಳಗಳಾಗಿವೆ. ಈ ಸ್ಥಳದಲ್ಲಿ ಸ್ಪೀಕರ್‌ ಸ್ಥಾನವೂ ಅಷ್ಟೇ ಪ್ರಮುಖವಾಗಿದೆ. ಅಂದು ಮಾರ್ಚ್‌ 21 ರಂದು ನಡೆದಿರುವ ಘಟನೆ ಉದ್ದೇಶ ಪೂರ್ವಕವಾಗಿ ಆಗಿರುವುದಲ್ಲ. ನಿಮ್ಮ ಬಗ್ಗೆ ಅಪಾರ ಗೌರವವಿದೆ. ಜನ ಸಾಮಾನ್ಯರ ಹಿತದೃಷ್ಠಿಯಿಂದ 18 ಬಿಜೆಪಿ ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಿರಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago