ರಾಜ್ಯ

ಉದಯಗಿರಿ ಪೊಲೀಸ್‌ ಠಾಣೆ ಕಲ್ಲು ತೂರಾಟ ಪ್ರಕರಣ:ಆರ್‌.ಅಶೋಕ್‌

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆಯ ಕಲ್ಲು ತೂರಾಟ ಪ್ರಕರಣವನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿ ಹೋಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ನಗರದ ಉದಯಗಿರಿ ಪೊಲೀಸ್‌ ಠಾಣೆಗೆ ಇಂದು(ಫೆಬ್ರವರಿ.11) ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪೊಲೀಸ್ ಅಧಿಕಾರಿಗಳ ಬಗ್ಗೆ ಬಹಳ ಕೆಟ್ಟದಾಗಿ ಸಚಿವ ಕೆ.ಎನ್‌.ರಾಜಣ್ಣ ಅವರು ಮಾತನಾಡಿದ್ದಾರೆ.  ರಾಜ್ಯದಲ್ಲಿ  ಪೊಲೀಸ್ ಇಲಾಖೆಯೇ ಸರಿ ಇಲ್ಲ ಎನ್ನುವುದಾದರೆ ಪೊಲೀಸ್‌ ಠಾಣೆ ಮುಚ್ಚಿ ಬಿಡಿ. ಇಂತಹ ಘಟನೆಯೇ ಹುಬ್ಬಳ್ಳಿಯಲ್ಲಿಯೂ ನಡೆದಾಗ ಸಿಎಂ ಸಿದ್ದರಾಮಯ್ಯ ಅವರೇ ಆರೋಪಿಗಳಿಗೆ ಖುಲಾಸೆ ಮಾಡಿ ಎಂದು ಧೈರ್ಯ ತುಂಬಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದೇ ಸಾಕ್ಷಿ ಎಂದು ವಾಗ್ದಾಳಿ ನಡೆಸಿದರು.

ಪೊಲೀಸರು, ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆ ತರದೆ ಕಾಂಗ್ರೆಸ್ ಅವರ ಅಪ್ಪನ ಮನೆಗಳಿಗೆ ಕರೆದುಕೊಂಡು ಹೋಗಬೇಕಿತ್ತಾ? ಉದಯಗಿರಿ ಏನೂ ಪಾಕಿಸ್ತಾನದಲ್ಲಿ ಇದೆಯಾ? ಅಥವಾ ಉದಯಗಿರಿಗೇ ಬೇರೆ ಕಾನೂನು ಇದೆಯಾ? ಆ ಮಂತ್ರಿಗೇನು ಕಾಮನ್ ಸೆನ್ಸ್ ಇಲ್ವಾ? ಈ ಪ್ರಕರಣದಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಕಾನೂನು ಉದಯಗಿರಿಗೆ ಅನ್ವಯ ಆಗಲ್ವಾ? ಸ್ವಲ್ಪ ಯಾಮಾರಿದ್ದರೆ ಪೊಲೀಸ್ ಠಾಣೆಯನ್ನೇ ಉಡೀಸ್ ಮಾಡಿ ಬಿಡುತ್ತಿದ್ದರು. ಈ ದೇಶದಲ್ಲಿ ಏನೇ ನಡೆದರು ಆರ್‌ಎಸ್‌ಎಸ್‌ ಕಾರಣನಾ? ಈ ಸರ್ಕಾರ ಬದುಕಿದೆಯಾ ಅಥವಾ ಸತ್ತು ಹೋಗಿದೆಯಾ ಗೊತ್ತಿಲ್ಲ ಎಂದು ಪ್ರಶ್ನಿಸಿದರು.

ಇನ್ನು ಗೃಹ ಸಚಿವರಿಗೆ ತಮ್ಮ ಇಲಾಖೆಯ ಬಗ್ಗೆಯೇ ಇಷ್ಟವಿಲ್ಲ. ಗೃಹ ಸಚಿವರಿಗೆ ಅವರದೇ ಇಲಾಖೆಯ ಮೇಲೆ ಆಸಕ್ತಿ ಇಲ್ಲ. ಒಟ್ಟಾರೆಯಾಗಿ ರಾಜ್ಯದಲ್ಲಿ ಸಂಪೂರ್ಣ ಕಾನೂನು ವ್ಯವಸ್ಥೆ ಹಾಳಾಗುರುವುದರಿಂದ ಈ ರಾಜ್ಯವನ್ನು ಆ ದೇವರೇ ಕಾಪಾಡಬೇಕು ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು ಉದಯಗಿರಿ ಪೊಲೀಸ್‌ ಠಾಣೆಯನ್ನು ಉಳಿಸುವ ಕೆಲಸ ಮಾಡಬೇಕು

ಸಿಎಂ ಸಿದ್ದರಾಮಯ್ಯ ಅವರು ಕೇವಲ ಆರು ತಿಂಗಳು ಮಾತ್ರ ಅಧಿಕಾರಲ್ಲಿರುತ್ತಾರೆ. ಆದರೆ ನಾನು ಈಗಾಗಲೇ ನವೆಂಬರ್‌ 15 ರವರೆಗೂ ಮಾತ್ರ ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂದು ಹೇಳಿದ್ದೀನಿ. ಇನ್ನು ಸಿಎಂ ಸಿದ್ದರಾಮಯ್ಯ ನಿದ್ದೆರಾಮಯ್ಯ ಆಗುವುದನ್ನು ಬಿಟ್ಟು ಈಗಲಾದರೂ ಆಡಳಿತದತ್ತ ಗಮನಹರಿಸಬೇಕು. ನಿಮಗಿರುವ ನವೆಂಬರ್‌ವರೆಗಿನ ಅವಧಿಯಲ್ಲಾದರೂ‌ ಒಳ್ಳೆಯ ಕೆಲಸ ಮಾಡಬೇಕು. ಒಳಿತು ಮಾಡು ಮನುಷ್ಯ ನೀ ಇರೋದು ಮೂರೇ ದಿವಸ ಎನ್ನುವ ಹಾಗೇ ಉದಯಗಿರಿ ಪೊಲೀಸ್‌ ಠಾಣೆಯನ್ನು ಉಳಿಸುವ ಕೆಲಸ ಮಾಡಿ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ…

1 hour ago

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…

1 hour ago

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

2 hours ago

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…

3 hours ago

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ…

3 hours ago

ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ವಿಪರೀತ ಬಿಸಿಲಿನ ತೀವ್ರತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…

3 hours ago