ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿನ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆಯಲ್ಲಿ ಪೊಲೀಸರು, ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಆ ಘಟನೆಯ ಹಿಂದಿರುವವರನ್ನು ಸರ್ಕಾರ ಕೂಡಲೇ ಪತ್ತೆ ಹಚ್ಚಬೇಕು ಎಂದು ವಿರೋಧ ಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಜನವರಿ.13) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ, ಚಾಮರಾಜಪೇಟೆಯಲ್ಲಿನ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ. ಈ ಕಾರಣಕ್ಕೆ ಹಸುಗಳ ಕೆಚ್ಚಲು ಕೊಯ್ದಿದಿರುವ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಆದರೆ ಇದೀಗ ಪೊಲೀಸರು ಕಾಟಾಚಾರಕ್ಕಾಗಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧನಪಡಿಸಿರುವ ವ್ಯಕ್ತಿಯೂ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ. ಹೀಗಾಗಿ ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿದರು.
ಈ ಘಟನೆ ನಡೆದ ಸ್ಥಳದಲ್ಲಿ ಪಶು ಆಸ್ಪತ್ರೆಯ ಸ್ಥಳವಿದ್ದು, ಅದನ್ನು ವಕ್ಫ್ ಬೋರ್ಡ್ ಮಂಡಳಿಗೆ ನೀಡಲು ಪ್ರಯತ್ನ ನಡೆದಿತ್ತು. ಈ ಸ್ಥಳವೂ ಸುಮಾರು 500 ಕೋಟಿ ರೂ. ಬೆಲೆಬಾಳುವ ಆಸ್ತಿಯಾಗಿದ್ದು, ಇದನ್ನುಲೂಟಿ ಮಾಡಲು ನಕಲಿ ದಾಖಲೆಗಳನ್ನು ಸರ್ಕಾರ ಸೃಷ್ಟಿ ಮಾಡಿತ್ತು. ಆದರೆ ಆ ವೇಳೆ ಆರ್‌ಎಸ್‌ಎಸ್ ಕಾರ್ಯಕರ್ತ ಕರ್ಣ ಎಂಬುವವರು ವಕ್ಫ್ ಬೋರ್ಡ್ ಮಂಡಳಿ ವಿರುದ್ಧ ಹೋರಾಟ ಮಾಡಿದರು. ಹೀಗಾಗಿ ಅವರ ಮೇಲೆ ಸೇಡು ತೀರಿಸಿಕೊಳ್ಳಲು ದುಷ್ಕರ್ಮಿಗಳು ಹಸುಗಳ ಕೆಚ್ಚಲು ಕೊಯ್ದಿದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇನ್ನೂ ಸಚಿವ ಜಮೀರ್ ಅಹಮದ್ ಖಾನ್ ಅವರು ಹಸುಗಳನ್ನು ನೀಡುವುದರಿಂದ ಪರಿಹಾರ ಸಿಗುವುದಿಲ್ಲ. ಅದರ ಬದಲಾಗಿ ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ನಡೆಸಬೇಕು. ತನಿಖೆ ನಡೆಸಿದರೆ ಮಾತ್ರ ನಿಜವಾದ ತಪ್ಪಿಸ್ಥರಿಗೆ ಶಿಕ್ಷೆಯಾಗುತ್ತದೆ. ಆಗ ಮಾತ್ರ ಈ ಘಟನೆಗೆ ನ್ಯಾಯ ದೊರಕಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು,…
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…