ಬೆಂಗಳೂರು: ಲಾಟರಿ ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಪಕ್ಷದ ಶಾಸಕರೇ ನಿಮ್ಮ ಸರ್ಕಾರಕ್ಕೆ ಛೀ, ಥೂ ಎಂದು ಉಗಿಯುತ್ತಿದ್ದಾರೆ. ಇನ್ನಾದರೂ ಈ ಭಂಡ ಬಾಳು ಸಾಕು ಮಾಡಿ. ರಾಜೀನಾಮೆ ಕೊಟ್ಟು ಈ ನಾಟಕಕ್ಕೆ ತೆರೆ ಎಳೆಯಿರಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಹೈಕಮಾಂಡ್ ಏಜೆಂಟ್ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಒಂದೆರಡು ಸೂಟ್‌ಕೇಸ್ ಕೊಟ್ಟು ಸುಮ್ಮನಾಗಿಸಬಹುದು. ಹೈಕಮಾಂಡ್‌ಗೆ ಭರಪೂರ ಕಪ್ಪ ಕಾಣಿಕೆ ಕೊಟ್ಟು ಬುಟ್ಟಿಗೆ ಹಾಕಿಕೊಳ್ಳಬಹುದು. ಶಾಸಕರಿಗೆ ಹೆದರಿಸಿ, ಬೆದರಿಸಿ ಅವರ ಬಾಯಿ ಮುಚ್ಚಿಸಬಹುದು. ಆದರೆ ಜನಸಾಮಾನ್ಯರ ಬಾಯಿ ಹೇಗೆ ಮುಚ್ಚಿಸುತ್ತೀರಿ ಎಂದು ಪ್ರಶ್ನೆ ಮಾಡಿದರು.
ಇನ್ನಾದರೂ ಈ ಭಂಡ ಬಾಳು ಸಾಕು ಮಾಡಿ. ರಾಜೀನಾಮೆ ಕೊಟ್ಟು ಈ ನಾಟಕಕ್ಕೆ ತೆರೆ ಎಳೆಯಿರಿ ಎಂದು ಟಾಂಗ್ ಕೊಟ್ಟಿದ್ದಾರೆ.





