ರಾಜ್ಯ

ರಾಜೀನಾಮೆ ಕೊಟ್ಟು ನಾಟಕಕ್ಕೆ ತೆರೆ ಎಳೆಯಿರಿ: ವಿಪಕ್ಷ ನಾಯಕ ಆರ್‌.ಅಶೋಕ್‌

ಬೆಂಗಳೂರು: ಲಾಟರಿ ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಪಕ್ಷದ ಶಾಸಕರೇ ನಿಮ್ಮ ಸರ್ಕಾರಕ್ಕೆ ಛೀ, ಥೂ ಎಂದು ಉಗಿಯುತ್ತಿದ್ದಾರೆ. ಇನ್ನಾದರೂ ಈ ಭಂಡ ಬಾಳು ಸಾಕು ಮಾಡಿ. ರಾಜೀನಾಮೆ ಕೊಟ್ಟು ಈ ನಾಟಕಕ್ಕೆ ತೆರೆ ಎಳೆಯಿರಿ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ಹೈಕಮಾಂಡ್‌ ಏಜೆಂಟ್‌ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರಿಗೆ ಒಂದೆರಡು ಸೂಟ್‌ಕೇಸ್‌ ಕೊಟ್ಟು ಸುಮ್ಮನಾಗಿಸಬಹುದು. ಹೈಕಮಾಂಡ್‌ಗೆ ಭರಪೂರ ಕಪ್ಪ ಕಾಣಿಕೆ ಕೊಟ್ಟು ಬುಟ್ಟಿಗೆ ಹಾಕಿಕೊಳ್ಳಬಹುದು. ಶಾಸಕರಿಗೆ ಹೆದರಿಸಿ, ಬೆದರಿಸಿ ಅವರ ಬಾಯಿ ಮುಚ್ಚಿಸಬಹುದು. ಆದರೆ ಜನಸಾಮಾನ್ಯರ ಬಾಯಿ ಹೇಗೆ ಮುಚ್ಚಿಸುತ್ತೀರಿ ಎಂದು ಪ್ರಶ್ನೆ ಮಾಡಿದರು.

ಇನ್ನಾದರೂ ಈ ಭಂಡ ಬಾಳು ಸಾಕು ಮಾಡಿ. ರಾಜೀನಾಮೆ ಕೊಟ್ಟು ಈ ನಾಟಕಕ್ಕೆ ತೆರೆ ಎಳೆಯಿರಿ ಎಂದು ಟಾಂಗ್‌ ಕೊಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

1 hour ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

2 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

2 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

3 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

3 hours ago