Mysore
18
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ರಾಜ್ಯ ಕಾಂಗ್ರೆಸ್‌ ಸರ್ಕಾರದ ದಿವಾಳಿತನವನ್ನು ಎಐಸಿಸಿ ಅಧ್ಯಕ್ಷರೇ ಎತ್ತಿ ತೋರಿಸಿದ್ದಾರೆ: ಆರ್‌.ಅಶೋಕ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ದಿವಾಳಿತನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಎತ್ತಿ ತೋರಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಖಾತೆಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, ಕರ್ನಾಟಕದಲ್ಲಿ ರಸ್ತೆಗುಂಡಿಗೆ ಒಂದು ಬುಟ್ಟಿ ಮಣ್ಣು ಹಾಕಲೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ದಿವಾಳಿತನವನ್ನ ಎತ್ತಿ ತೋರಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಸರ್ಕಾರದ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮತ್ತು ಭ್ರಷ್ಟಚಾರವನ್ನ ಬಯಲು ಮಾಡಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರದ ಯಾವುದೇ ಯೋಜನೆ ಮೈಸೂರಿನಿಂದ ಪ್ರಾರಂಭವಾಗಿ ದಾವಣಗೆರೆಗೆ ಬಂದು ನಿಂತುಬಿಡುತ್ತದೆ, ಬಳ್ಳಾರಿಯವರೆಗೂ ತಲುಪುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ದೆಹಲಿಯಿಂದ ಒಂದು ರೂಪಾಯಿ ಬಿಡುಗಡೆ ಮಾಡಿದರೆ ಜನರಿಗೆ ತಲುಪುವಷ್ಟರಲ್ಲಿ 15 ಪೈಸೆ ಆಗಿರುತ್ತದೆ ಎಂದು ರಾಜೀವ ಗಾಂಧಿ ಅವರು ಕಾಂಗ್ರೆಸ್ ಆಡಳಿತದಲ್ಲಿ 85% ಭ್ರಷ್ಟಚಾರ ಇತ್ತು ಎಂದು ಒಪ್ಪಿಕೊಂಡಿದ್ದರು. ಆದರೆ ಈಗ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕಕ್ಕೆ ಬಿಡುಗಡೆ ಆಗುವ ಅನುದಾನ ದಾವಣಗೆರೆಯಲ್ಲಿಯೇ ನಿಂತು ಹೋಗುತ್ತದೆ, ಬಳ್ಳಾರಿಯೂ ತಲುಪಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಒಪ್ಪಿಕೊಂಡಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲ ಎಂಬಂತಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿ ವಿದೇಶಿ ಪ್ರವಾಸಿಗರ ಮೇಲೆ ಹಲ್ಲೆ, ಅತ್ಯಾಚಾರ ನಡೆಸಿರುವುದು ಕರ್ನಾಟಕದ ಘನತೆ, ಗೌರವಕ್ಕೆ ಮಸಿ ಬಳಿದಿದ್ದು, ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆಗೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರೇ, ಇಡೀ ದೇಶದಲ್ಲೇ ದಕ್ಷತೆಗೆ ಹೆಸರಾಗಿದ್ದ ಕರ್ನಾಟಕ ಪೋಲೀಸರ ಕೈ ಕಟ್ಟಿ ಕರ್ನಾಟಕವನ್ನು ಅಪರಾಧಗಳ ನಾಡನ್ನಾಗಿ ಮಾಡಿದ್ದೀರ. ಮಹಿಳೆಯರಿಗೆ ಸುರಕ್ಷತೆ ನೀಡಲಾಗದ ಸರ್ಕಾರವಿದ್ದು ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ.

ಕಳಪೆ ಗುಣಮಟ್ಟದ ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣ ಕೊಟ್ಟು ಬಾಣಂತಿ ಮಹಿಳೆಯರ ಸರಣಿ ಸಾವಿಗೆ ಕಾರಣವಾಗಿದ್ದ ಕೊಲೆಗಡುಕ ಕಾಂಗ್ರೆಸ್‌ ಸರ್ಕಾರ ಈಗ ಕಳಪೆ ಗುಣಮಟ್ಟದ ಪೆಂಟಾವಲೆಂಟ್ ಲಸಿಕೆ ನೀಡಿ ಎಳೆ ಮಕ್ಕಳನ್ನು ಕೊಲ್ಲುತ್ತಿದೆ. ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಸರ್ಕಾರದ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:
error: Content is protected !!