ರಾಜ್ಯ

ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ ರದ್ದು ಮಾಡಿ, ಹೊಸ ಅಧಿಸೂಚನೆ ಹೊರಡಿಸಿ: ಆರ್‌.ಅಶೋಕ್‌

ಬೆಂಗಳೂರು: ಕೆಪಿಎಸ್‌ಸಿಯೂ ನಡೆಸಿದ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪುಗಳಿರುವ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸಬೇಕು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದರು.

ವಿಧಾನಸೌಧದ ಬಜೆಟ್‌ ಅಧಿವೇಶನದಲ್ಲಿ ಇಂದು(ಮಾರ್ಚ್.4) ಈ ಕುರಿತು ನಿಯಮ 69ರ ಅಡಿಯಲ್ಲಿ ಭೋಜನ ವಿರಾಮದ ಬಳಿಕ ಮಾತನಾಡಿದ ಅವರು, ವಯಸ್ಸಿನ ಮಿತಿ ನಿರ್ಬಂಧ ಸಡಿಲಿಸಿ ಅರ್ಜಿ ಸಲ್ಲಿಸಿದ್ದ ಎಲ್ಲ 2.30 ಲಕ್ಷ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಗೂಗಲ್ ಭಾಷಾಂತರದ ಮೂಲಕ ಕನ್ನಡಕ್ಕೆ ಅಪಮಾನ ಮಾಡಿರುವ ಅಧಿಕಾರಿಗೆ ಭಾಷಾನೀತಿ ಅವಹೇಳನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಬೇಜವಾಬ್ದಾರಿ ಹಾಗೂ ಹೊಣೆಗಾರಿಕೆ ಮರೆತು ಕಾರ್ಯ ನಿರ್ವಹಿಸಿರುವ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಅವರ ವಿರುದ್ಧ ವಿಚಾರನೇಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.

ಇನ್ನು ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಗೆ ಖರ್ಚಾಗಿರುವ 25 ಕೋಟಿ ರೂ.ಗಳಿಗೂ ಹೆಚ್ಚಾಗಿರುವ ಹಣದ ನಷ್ಟವನ್ನು ತಪ್ಪಿತಸ್ಥರಿಂದಲೇ ವಸೂಲಿ ಮಾಡಬೇಕು. ಪದೇ ಪದೇ ಪ್ರಶ್ನೆಪತ್ರಿಕೆ ಗೊಂದಲ ಆಗದಂತೆ ಎಚ್ಚರವಹಿಸಲು ಯುಪಿಎಸ್‌ಸಿ ಮಾದರಿ ಅಳವಡಿಸಿಕೊಳ್ಳಲು ಸೂಚನೆ ನೀಡಬೇಕು. ಅಲ್ಲದೇ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್‌ಪೆಕ್ಟ‌ರ್ ಹಾಗೂ ಎಇಇ ಹುದ್ದೆಗಳ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಅರ್ಚನ ಎಸ್‌ ಎಸ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

1 hour ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

3 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

4 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

7 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

7 hours ago