ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜನಕಲ್ಯಾಣ ಸಮಾವೇಶ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವೆ ಅದೇನು ‘ಒಪ್ಪಂದ’ ಆಗಿದೆಯೋ, ಆ ‘ಒಪ್ಪಂದ’ ಕಾರ್ಯಗತ ಆಗೋಲ್ಲ ಅನ್ನೋ ಅನುಮಾನ ಡಿ.ಕೆ.ಶಿವಕುಮಾರ್ ಅವರಿಗೆ ಯಾಕೆ ಕಾಡುತ್ತಿದೆಯೋ ಗೊತ್ತಿಲ್ಲ. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಶೀಘ್ರದಲ್ಲೇ ದೊಡ್ಡ ರಾಜಕೀಯ ಸ್ಫೋಟವಾಗುವ ಎಲ್ಲ ಲಕ್ಷಣಗಳಂತೂ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಟೀಕಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರೇ ತಾವು ಚೆಸ್ ಆದರೂ ಆಡಿ, ಫುಟ್ಬಾಲ್ ಆದರೂ ಆಡಿ, ಆದರೆ ನಿಮ್ಮ ರಾಜಕೀಯ ಮೇಲಾಟದಲ್ಲಿ ಕನ್ನಡಿಗರ ಬದುಕಿನ ಜೊತೆ ಮಾತ್ರ ಚೆಲ್ಲಾಟವಾಡಬೇಡಿ. ತಮ್ಮ loyalty ಗೆ ತಮ್ಮ ಹೈಕಮಾಂಡ್ royalty ಕೊಡುತ್ತೋ ಬಿಡುತ್ತೋ ಅದು ನಿಮ್ಮ ಪಕ್ಷದ ಆಂತರಿಕ ವಿಚಾರ, ಆದರೆ ಕಾಂಗ್ರೆಸ್ ಪಕ್ಷಕ್ಕೆ loyal ಆಗಿ ಮತ ನೀಡಿ ಅಧಿಕಾರ ಕೊಟ್ಟಿರುವ ಕರ್ನಾಟಕದ ಮಾತಾದರರಿಗೆ ಅಭಿವೃದ್ಧಿಯ royalty ಕೊಟ್ಟು ಕನ್ನಡಿಗರ ಋಣ ತೀರಿಸಿ ಎಂದು ಹೇಳಿದ್ದಾರೆ.
ನೀವು ವ್ಯಕ್ತಿ ಪೂಜೆ ಆದರೂ ಮಾಡಿ, ಪಕ್ಷ ಪೂಜೆ ಆದರೂ ಮಾಡಿ, ಆದರೆ ಕಾಂಗ್ರೆಸ್ ಪಕ್ಷವನ್ನು ನಂಬಿ ಅಧಿಕಾರ ಕೊಟ್ಟಿರುವ ಮತದಾರ ಪ್ರಭುಗಳಿಗೆ ದ್ರೋಹ ಬಗೆಯಬೇಡಿ ಎಂದು ಪೋಸ್ಟ್ ಮಾಡಿದ್ದಾರೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…