Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಕಾಂಗ್ರೆಸ್‌ ಅಭಿವೃದ್ಧಿಯಾಗಿದೆಯೇ ಹೊರತು, ರಾಜ್ಯ ಅಭಿವೃದ್ಧಿಯಾಗಿಲ್ಲ: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಭಿವೃದ್ಧಿಯಾಗಿದೆಯೇ ಹೊರತು, ರಾಜ್ಯ ಅಭಿವೃದ್ಧಿಯಾಗಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದರು.

ವಿಧಾನಸೌಧದಲ್ಲಿ ಇಂದು(ಮಾರ್ಚ್‌.3) ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ರಾಜ್ಯ ಸರ್ಕಾರದ ಸಾಧನೆ ಬಗ್ಗೆ ವಿವರಿಸಿದ್ದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರ್.ಅಶೋಕ್‌ ಅವರು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಆದರೆ ಕಾಂಗ್ರೆಸ್‌ ಅಭಿವೃದ್ಧಿಯಾಗಿದೆ. ಈ ಹಿಂದೆ ರಾಜ್ಯಪಾಲರನ್ನು ಕಾಂಗ್ರೆಸ್ಸಿಗರು ಹಿಯಾಳಿಸಿದ್ದರು. ಇದೀಗ ಅವರಿಂದಲೇ ಸರ್ಕಾರದ ಸಾಧನೆ ಬಗ್ಗೆ ಭಾಷಣ ಮಾಡಿಸಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಸರ್ಕಾರ ಕೈಗೆಟುಕುವ ದರದಲ್ಲೇ ಆರೋಗ್ಯ ಸೇವೆ ಎಂದಿದ್ದರು. ಆದರೆ ರಾಜ್ಯದಲ್ಲಿ ಬಡವರಿಗೆ ಎಲ್ಲಿ ಆರೋಗ್ಯ ಸೇವೆ ಸಿಗುತ್ತಿದೆ. ಅಲ್ಲದೇ ಎಸ್‌ಸಿ ಮತ್ತು ಎಸ್‌ಟಿ ಹಣ ದುರುಪಯೋಗವಾಗುತ್ತದೆ. ಸರ್ಕಾರದವರು ಯಾವ ನೀರಾವರಿ ಯೋಜನೆ ಮಾಡಿದ್ದಾರೆ. ಇನ್ನು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸರಿಯಾಗಿದೆ ಎಂದು ಭಾಷಣ ಮಾಡಿಸಿದ್ದಾರೆ. ಆದರೆ ಮೈಸೂರಿನ ಉಪಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಹಾಗೂ ರಾಜ್ಯಾದ್ಯಂತ ಹಲವೆಡೆಯ ಎಟಿಎಂಗಳಲ್ಲಿ ಕಳ್ಳತನವಾಗಿದೆ ಎಂದು ವಾಗ್ದಾಳಿ ನಡೆಸಿದರು.

Tags:
error: Content is protected !!