ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಭಿವೃದ್ಧಿಯಾಗಿದೆಯೇ ಹೊರತು, ರಾಜ್ಯ ಅಭಿವೃದ್ಧಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ವಿಧಾನಸೌಧದಲ್ಲಿ ಇಂದು(ಮಾರ್ಚ್.3) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಸಾಧನೆ ಬಗ್ಗೆ ವಿವರಿಸಿದ್ದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಆದರೆ ಕಾಂಗ್ರೆಸ್ ಅಭಿವೃದ್ಧಿಯಾಗಿದೆ. ಈ ಹಿಂದೆ ರಾಜ್ಯಪಾಲರನ್ನು ಕಾಂಗ್ರೆಸ್ಸಿಗರು ಹಿಯಾಳಿಸಿದ್ದರು. ಇದೀಗ ಅವರಿಂದಲೇ ಸರ್ಕಾರದ ಸಾಧನೆ ಬಗ್ಗೆ ಭಾಷಣ ಮಾಡಿಸಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರ ಕೈಗೆಟುಕುವ ದರದಲ್ಲೇ ಆರೋಗ್ಯ ಸೇವೆ ಎಂದಿದ್ದರು. ಆದರೆ ರಾಜ್ಯದಲ್ಲಿ ಬಡವರಿಗೆ ಎಲ್ಲಿ ಆರೋಗ್ಯ ಸೇವೆ ಸಿಗುತ್ತಿದೆ. ಅಲ್ಲದೇ ಎಸ್‌ಸಿ ಮತ್ತು ಎಸ್‌ಟಿ ಹಣ ದುರುಪಯೋಗವಾಗುತ್ತದೆ. ಸರ್ಕಾರದವರು ಯಾವ ನೀರಾವರಿ ಯೋಜನೆ ಮಾಡಿದ್ದಾರೆ. ಇನ್ನು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸರಿಯಾಗಿದೆ ಎಂದು ಭಾಷಣ ಮಾಡಿಸಿದ್ದಾರೆ. ಆದರೆ ಮೈಸೂರಿನ ಉಪಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಹಾಗೂ ರಾಜ್ಯಾದ್ಯಂತ ಹಲವೆಡೆಯ ಎಟಿಎಂಗಳಲ್ಲಿ ಕಳ್ಳತನವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…