ಬೆಂಗಳೂರು: ನಾನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಆಕಾಂಕ್ಷಿಯಲ್ಲ, ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸುತ್ತಿದ್ದೇನೆ. ನನಗೆ ಪಕ್ಷದ ಹಿರಿಯರು ನೀಡಿದ ವಿಪಕ್ಷ ನಾಯಕತ್ವದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ಹೀಗಾಗಿ ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದರು.
ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆರ್ಜಿ ಹಾಕಿಲ್ಲ, ಆ ಬಗ್ಗೆ ನಾನು ಯಾವುದೇ ರೀತಿಯ ಆಲೋಚನೆಗಳನ್ನು ಮಾಡಿಲ್ಲ. ಆದರೆ ನಮ್ಮ ಪಕ್ಷದಲ್ಲಿ ಈ ರೀತಿಯ ಸಮಸ್ಯೆ ಎದುರಾಗಿರುವುದು ನನಗೂ ನೋವು ಉಂಟು ಮಾಡಿದೆ. ಪಕ್ಷದಲ್ಲಿ ಎಲ್ಲರೂ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯಬೇಕಾಗುತ್ತದೆ ಎಂದು ಹೇಳಿದರು.
ಇನ್ನೂ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಣದ ಬಗ್ಗೆ ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಅಲ್ಲದೇ ಪಕ್ಷದಲ್ಲಿರುವ ಎಲ್ಲ ಸಮಸ್ಯೆಗಳು ನಿವಾರಣೆಯಾಗಲಿ ಎಂದು ಬಯಸುತ್ತೇನೆ. ಈ ರಾಜ್ಯಾಧ್ಯಕ್ಷ ಚುನಾವಣೆಯೂ ಕರ್ನಾಟಕದಲ್ಲಿ ಮಾತ್ರ ನಡೆಯುತ್ತಿಲ್ಲ, ಇಡೀ ದೇಶದಲ್ಲಿ ಚುನಾವಣೆ ನಡೆಯುತ್ತಿದೆ. ಹೀಗಾಗಿ ಇಲ್ಲಿ ಮಾತ್ರ ಎಲ್ಲರ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ತಿಳಿಸಿದರು.
ನಮ್ಮ ಪಕ್ಷದ ನಾಯಕರು ಒಬ್ಬರ ಮೇಲೆ ಮತ್ತೊಬ್ಬರು ದೂರುವುದು ಬೇಸರದ ಸಂಗತಿಯಾಗಿದೆ. ಹಾಗಾಗಿ ರಾಷ್ಟ್ರೀಯ ನಾಯಕರು ನೀಡುವ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು. ಇಲ್ಲಿ ಎಲ್ಲರಿಗೂ ಅಭಿಪ್ರಾಯ ತಿಳಿಸುವ ಅವಕಾಶವಿದೆ. ಪಕ್ಷದಲ್ಲಿ ಇಂತಹ ಸಮಸ್ಯೆಗಳಿಂದಾಗಿ ಹಿನ್ನಡೆ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…