ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಹಣ ಜಮೆಯಾಗದ ಬಗ್ಗೆ ಪ್ರಶ್ನಿಸಿದ್ದಕ್ಕೇ ಆ ಹಣವೇನು ತಿಂಗಳ ಸಂಬಳ ಅಲ್ಲವಲ್ಲ ಎಂದಿದ್ದ ಸಚಿವ ಕೆ.ಜೆ. ಜಾರ್ಜ್ ಅವರ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿ ಕಾಂಗ್ರೆಸ್ ಕೋಳಿ ಕೂಗಿದರೆ ರಾಜ್ಯದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಎಂದು ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ? ಎಂದು ಪ್ರಶ್ನಿಸಿದ್ದಾರೆ.
ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಎಂದು ಮಾತಾದರರೇನು ನಿಮ್ಮ ಬಳಿ ಭಿಕ್ಷೆ ಬೇಡುತ್ತಿಲ್ಲ. ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಎಂದು ಜನತೆ ಕೇಳಿಯೂ ಇರಲಿಲ್ಲ. ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ? ನಿಮ್ಮ ಕೈಲಾದರೆ ಕೊಟ್ಟ ಮಾತಿನಂತೆ ಗ್ಯಾರೆಂಟಿ ಯೋಜನೆಗಳನ್ನು ಗೌರವದಿಂದ ಜಾರಿ ಮಾಡಿ. ನಿಮ್ಮ ಕೈಲಾಗದಿದ್ದರೆ ಬಿಟ್ಟುಬಿಡಿ, ಗ್ಯಾರೆಂಟಿ ಯೋಜನೆಗಳು ಜಾರಿ ಆಗುವ ಮುನ್ನವೂ ಜನರು ತಮ್ಮ ಬದುಕು ಕಟ್ಟಿಕೊಂಡಿದ್ದರು. ಅವು ಇಲ್ಲದೆಯೂ ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕಾಂಗ್ರೆಸ್ ಕೋಳಿ ಕೂಗಿದರೆ ಕರ್ನಾಟಕದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ. ಈಗಾಗಲೇ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಅಡ್ರೆಸ್ ಇಲ್ಲದಂತಾಗಿದೆ. ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ನಿರ್ನಾಣ ಆಗುವುದು ಗ್ಯಾರೆಂಟಿ ಎಂದು ಎಚ್ಚರಿಸಿದ್ದಾರೆ.
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…
ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…
ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…