ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಸದನದಿಂದ ಆರು ತಿಂಗಳ ಕಾಲ ಬಜೆಪಿಯ 18 ಶಾಸಕರನ್ನು ಅಮಾನತು ಮಾಡಿರುವ ಆದೇಶ, ಸ್ಪೀಕರ್ ಯು.ಟಿ.ಖಾದರ್ ಅವರ ನಿರ್ಧಾರವೂ ಹಿಟ್ಲರ್ ಸಂಸ್ಕೃತಿಯನ್ನು ತೋರುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.22) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಶೇ.4% ರಷ್ಟು ಮೀಸಲಾತಿ ನೀಡುವ ಬಗ್ಗೆ ಸ್ಪೀಕರ್ ಯು.ಟಿ.ಖಾದರ್ ಹಾಗೂ ರಾಜ್ಯ ಸರ್ಕಾರ ಒಡಂಬಡಿಕೆ ಮಾಡಕೊಂಡು ಮುಸ್ಲೀಮರಿಗೆ ಮೀಸಲಾತಿ ತೀರ್ಮಾನ ಮಾಡಿದ್ದಾರೆ. ಅಲ್ಲದೇ ಶುಕ್ರವಾರದ ಸದನದಲ್ಲಿ ಸ್ಪೀಕರ್ ಅವರ ಪ್ರಚೋದನೆಯಿಂದಲೇ ಈ ಘಟನೆಯಾಗಿದೆ ಎಂದು ಆರೋಪಿಸಿದ್ದಾರೆ.
ಇನ್ನೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈಗಾಗಲೇ ಮುಸಲ್ಮಾನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಿದ್ದಾರೆ. ಆದರೆ ಮೀಸಲಾತಿ ನೀಡಿದ ವೇಳೆ ಅವರು ನಮ್ಮ ಪಕ್ಷದೊಂದಿಗೆ ಮೈತ್ರಿ ಆಗಿರಲಿಲ್ಲ. ಹೀಗಾಗಿ ನಾವೂ ಮೀಸಲಾತಿ ವಿಚಾರದಲ್ಲಿ ರಾಜ್ಯವ್ಯಾಪಿ ಹೋರಾಟ ನಡೆಸುತ್ತೇವೆ. ನಮ್ಮೊಂದಿಗೆ ಎಚ್.ಡಿ.ದೇವೇಗೌಡ ಅವರು ಕೂಡ ಹೋರಾಟ ನಡೆಸಬೇಕು ಎಂದು ಹೇಳಿದರು.





