ಬೆಂಗಳೂರು: ಮುಡಾ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ತೀರ್ಪಅನ್ನು ನಾವು ಸ್ವಾಗತಿಸಿದ್ದು, ಆ ತೀರ್ಪನ್ನು ಗೌರವಿಸುತ್ತೇವೆ. ಆದರೆ ಮುಡಾ ಅಕ್ರಮದ ವಿರುದ್ಧ ನಮ್ಮ ಹೋರಾಟ ಮುಂದುವೆಯಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ಹೈಕೋರ್ಟ್ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರ ಅರ್ಜಿಯನ್ನು ತಿರಸ್ಕರಿಸಿದೆ. ಈಗಾಗಲೇ ಈ ಪ್ರಕರಣದ ವಿಚಾರವಾಗಿ ಲೋಕಾಯುಕ್ತ ಮತ್ತು ಇ.ಡಿ.ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿದೆ. ಹೀಗಾಗಿ ಈ ಅರ್ಜಿ ವಿಚಾರಣೆಯನ್ನು ರದ್ದುಗೊಳಿಸಿದೆ ಎಂದು ತೀರ್ಪು ಪ್ರಕಟಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ ಎಂದರು.
ಇನ್ನೂ ಮುಡಾ ಹೆಸರಿನಲ್ಲಿ ಲೂಟಿ ಆಗಿರೋದು ರಾಜ್ಯದ ಖಾಜಾನೆಗೆ ಬರುತ್ತದೆ ಎಂಬ ನಂಬಿಕೆ ಇದೆ. ಕಾನೂನಿನ ಮೇಲೆ ನಮಗೆ ಗೌರವ ಇದೆ. ಮುಡಾ ಪ್ರಕರಣವನ್ನ ಸಿಬಿಐಗೆ ಕೊಡಬೇಕು ಎಂದು ನಾವು ಹೋರಾಟ ಮಾಡಿದ್ದೇವು. ಹಾಗಾಗಿ ಮುಂದೆಯೂ ಕಾನೂನು ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪೋಕ್ಸೋ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ ಅವರಿಗೆ ಕೋರ್ಟ್ ರಿಲೀಫ್ ನೀಡಿದೆ. ಈ ತೀರ್ಪು ಸಮಾಧಾನ ತಂದಿದೆ. ಮುಂದಿನ ತನಿಖೆ ಏನು ನಡೆಯಬೇಕೋ ಅದು ನಡೆಯುತ್ತದೆ ಎಂದು ತಿಳಿಸಿದರು.
ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್ ಕಿಟ್ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ…
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (WPL) ಟಿ20 ಕ್ರಿಕೆಟ್ ಟೂನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದ್ದಾರೆ. ರಾಜ್ಯ…
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…
ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ…