ರಾಜ್ಯ

ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಿಗೆ ರಕ್ಷಣೆ ಇಲ್ಲ, ಜನ ಸಾಮಾನ್ಯರಿಗೆ ಯಾವ ರಕ್ಷಣೆ ಇದೆ?: ಆರ್‌.ಅಶೋಕ್‌

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಿಗೆ, ಹಿರಿಯ ಶಾಸಕರಿಗೆ ರಕ್ಷಣೆ ಇಲ್ಲ ಅಂದ ಮೇಲೆ, ರಾಜ್ಯದ ಜನ ಸಾಮಾನ್ಯರಿಗೆ ರಕ್ಷಣೆ ಇದೆಯಾ? ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಪ್ರಶ್ನಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದಲಿತ ಸಚಿವರೊಬ್ಬರು ತಮ್ಮ ಮೇಲೆ ನಡೆಯುತ್ತಿರುವ ಹನಿಟ್ರ್ಯಾಪ್ ಪ್ರಯತ್ನಗಳ ಬಗ್ಗೆ ಅಸಹಾಯಕರಾಗಿ ಸದನದಲ್ಲಿ ಹಂಚಿಕೊಂಡು ಸರ್ಕಾರದ ರಕ್ಷಣೆ ಕೋರಿದರೆ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಎಂದಿನ ನಟ್ಟು-ಬೊಲ್ಟು ಟೈಟು ಮಾಡುವ ಧಾಟಿಯಲ್ಲಿ, “ಹಲೋ ಎಂದರೆ ಹಲೋ ಎನ್ನುತ್ತಾರೆ”, “ಮಾಡಿದ್ದುಣ್ಣೋ ಮಹರಾಯ” ಎಂದು ಸಚಿವರ ಮೇಲೆಯೇ ಗೂಬೆ ಕೂರಿಸುವ ಅರ್ಥದಲ್ಲಿ ಮಾತಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಮ್ಮ ರಾಜ್ಯದಲ್ಲಿ ಒಬ್ಬ ಹಿರಿಯ ಶಾಸಕರು, ಹಾಲಿ ಸಚಿವರಿಗೇ ರಕ್ಷಣೆ ಇಲ್ಲ ಅಂದ ಮೇಲೆ ಈ ಹನಿಟ್ರ್ಯಾಪ್ ಕಾಂಗ್ರೆಸ್‌ ಸರ್ಕಾರದಲ್ಲಿ ಜನ ಸಾಮಾನ್ಯರಿಗೆ ಯಾವ ರಕ್ಷಣೆ ಇದೆ? ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

2 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

2 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

3 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

4 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

5 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

6 hours ago