ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರಿಗೆ ಇಡೀ ಸರ್ಕಾರ ಬೆಂಬಲ ನೀಡಿದ್ದು, ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿ ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.
ವಿಧಾನಸೌಧದಲ್ಲಿ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂಭಾಗ ಇಂದು(ಫೆಬ್ರವರಿ.12) ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ. ಇದರಿಂದ ತಿಳಿಯುವುದೆನೆಂದರೆ ಕಾಂಗ್ರೆಸ್ ಸರ್ಕಾರ ಮರಳು ಮಾಫಿಯಾ ಜೊತೆ ಸೇರಿದ್ದು, ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಮತಾಂಧರು ದಾಳಿ ಮಾಡಿದರೂ ಪೊಲೀಸರಿಗೆ ರಕ್ಷಣೆ ನೀಡಿಲ್ಲ. ಇಂತಹ ಘಟನೆಗಳಿಂದ ಪೊಲೀಸ್ ಅಧಿಕಾರಿಗಳ ಆತ್ಮಸ್ಥೈರ್ಯ ಕುಸಿದಿದೆ. ನಿಷ್ಠಾವಂತ ಅಧಿಕಾರಿಗಳು ಹಾಗೂ ಪೊಲೀಸರಿಗೆ ರಕ್ಷಣೆ ನೀಡಿ ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ನಿಷ್ಠಾವಂತ ಅಧಿಕಾರಿಗಳನ್ನು ಕಾಪಾಡಬೇಕಾದ ವಿಧಾನಸೌಧ ಮೌನ ಸೌಧವಾಗಿದೆ. ಸರ್ಕಾರಿ ಕೆಲಸ ದೇವರ ಕೆಲಸ ಎಂದು ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಬರೆಸಿದ್ದಾರೆ. ಆದರೆ ಇದೀಗ ಕಾಂಗ್ರೆಸ್‌ನಿಂದಾಗಿ ಇದು ದೆವ್ವಗಳ ಕೆಲಸ ಎಂಬಂತಾಗಿದೆ. ಭದ್ರಾವತಿಯಲ್ಲಿ ಮರಳು ಮಾಫಿಯಾ ತಡೆಯಲು ಹೋದ ಮಹಿಳಾ ಅಧಿಕಾರಿಯ ಮೇಲೆ ಲಾರಿ ಹತ್ತಿಸಿ ಕೊಲ್ಲುವುದಾಗಿ ಶಾಸಕರ ಮಗ ಜೀವ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಆ ವೇಳೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿರುವುದರಿಂದ ಅಧಿಕಾರಿಗಳಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಎಫ್‌ಐಆರ್‌ನಲ್ಲಿ ಶಾಸಕ ಸಂಗಮೇಶ್ ಪುತ್ರನ ಹೆಸರಿಲ್ಲ. ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗಿದೆ. ಹೀಗಾಗಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿಕೆ ನೀಡುವ ಬದಲು ಬೀದಿಗಿಳಿದು ಹೋರಾಟ ಮಾಡಬೇಕು ಎಂದು ಹೇಳಿದರು.
ಕಳೆದ ದಿನಗಳ ಹಿಂದೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಮೈಸೂರಿನಲ್ಲಿ ಯಾರನ್ನೂ ಬಂಧಿಸಿಲ್ಲ. ಇಡೀ ಸರ್ಕಾರ ಗಲಭೆಕೋರರ ಪರವಾಗಿ ನಿಂತಿದೆ. ಅದರ ಬದಲು ಪೊಲೀಸ್ ಅಧಿಕಾರಿಗಳನ್ನೇ ಟೀಕಿಸಲಾಗುತ್ತಿದೆ. ಮುಸ್ಲಿಮ್‌ರಿಂದ ಗೆದ್ದ ಸಚಿವರು ಅವರ ಪರವಾಗಿ ಮಾತಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನೂ ಭದ್ರಾವತಿಯ ಮಹಿಳಾ ಅಧಿಕಾರಿಯ ಮೇಲೆ ಒತ್ತಡ ಹೇರಲಾಗಿದೆ. ಆ ಭಯದಿಂದಲೇ ಅವರು ಯಾರ ಮೇಲೂ ದೂರು ನೀಡಿಲ್ಲ. ದೂರು ನೀಡಿದರೂ ಸರ್ಕಾರ ಅಧಿಕಾರಿಯ ಪರವಾಗಿ ನಿಲ್ಲುವುದಿಲ್ಲ. ಪೊಲೀಸ್ ಅಧಿಕಾರಿಗೆ ಸ್ಟಾರ್ ನೀಡಿದವರು ಯಾರು ಎಂದು ಸಚಿವ ರಾಜಣ್ಣ ಪ್ರಶ್ನೆ ಮಾಡಿದ್ದಾರೆ. ಪೊಲೀಸರಿಗೆ ಜನರು ಸ್ಟಾರ್ ನೀಡಿದ್ದಾರೆ. ಅವರಿಗೆ ಜನರ ತೆರಿಗೆ ಹಣದಿಂದ ಸಂಬಳ ನೀಡಲಾಗುತ್ತಿದೆಯೇ ಹೊರತು, ಸಚಿವರ ಹಣದಿಂದ ನೀಡುತ್ತಿಲ್ಲ. ಪೊಲೀಸರನ್ನು ಪ್ರಶ್ನಿಸುವುದಿದ್ದರೆ ಕಚೇರಿಯಲ್ಲಿ ಕರೆದು ಮಾತಾಡಬೇಕು. ಅದನ್ನು ಬಿಟ್ಟು ಸಾರ್ವಜನಿಕ ಸ್ಥಳದಲ್ಲಿ ಅವರನ್ನು ನಿಂದಿಸಬಾರದು. ಹೀಗೆ ಮಾಡಿದರೆ ಪೊಲೀಸರು ಆತ್ಮವಿಶ್ವಾಸದಿಂದ ಕೆಲಸ ಮಾಡುವುದು ಹೇಗೆ? ಎಂದು ಪ್ರಶ್ನೆ ಮಾಡಿದರು.
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…