ರಾಜ್ಯ

ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ: ಆರ್‌.ಅಶೋಕ್‌

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರಿಗೆ ಇಡೀ ಸರ್ಕಾರ ಬೆಂಬಲ ನೀಡಿದ್ದು, ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿ ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದರು.

ವಿಧಾನಸೌಧದಲ್ಲಿ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಮುಂಭಾಗ ಇಂದು(ಫೆಬ್ರವರಿ.12) ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ. ಇದರಿಂದ ತಿಳಿಯುವುದೆನೆಂದರೆ ಕಾಂಗ್ರೆಸ್‌ ಸರ್ಕಾರ ಮರಳು ಮಾಫಿಯಾ ಜೊತೆ ಸೇರಿದ್ದು, ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಮುಸ್ಲಿಂ ಮತಾಂಧರು ದಾಳಿ ಮಾಡಿದರೂ ಪೊಲೀಸರಿಗೆ ರಕ್ಷಣೆ ನೀಡಿಲ್ಲ. ಇಂತಹ ಘಟನೆಗಳಿಂದ ಪೊಲೀಸ್‌ ಅಧಿಕಾರಿಗಳ ಆತ್ಮಸ್ಥೈರ್ಯ ಕುಸಿದಿದೆ. ನಿಷ್ಠಾವಂತ ಅಧಿಕಾರಿಗಳು ಹಾಗೂ ಪೊಲೀಸರಿಗೆ ರಕ್ಷಣೆ ನೀಡಿ ಎಂದು ಪೊಲೀಸ್‌ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ನಿಷ್ಠಾವಂತ ಅಧಿಕಾರಿಗಳನ್ನು ಕಾಪಾಡಬೇಕಾದ ವಿಧಾನಸೌಧ ಮೌನ ಸೌಧವಾಗಿದೆ. ಸರ್ಕಾರಿ ಕೆಲಸ ದೇವರ ಕೆಲಸ ಎಂದು ಮಾಜಿ ಸಿಎಂ ಕೆಂಗಲ್‌ ಹನುಮಂತಯ್ಯ ಬರೆಸಿದ್ದಾರೆ. ಆದರೆ ಇದೀಗ ಕಾಂಗ್ರೆಸ್‌ನಿಂದಾಗಿ ಇದು ದೆವ್ವಗಳ ಕೆಲಸ ಎಂಬಂತಾಗಿದೆ. ಭದ್ರಾವತಿಯಲ್ಲಿ ಮರಳು ಮಾಫಿಯಾ ತಡೆಯಲು ಹೋದ ಮಹಿಳಾ ಅಧಿಕಾರಿಯ ಮೇಲೆ ಲಾರಿ ಹತ್ತಿಸಿ ಕೊಲ್ಲುವುದಾಗಿ ಶಾಸಕರ ಮಗ ಜೀವ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಆ ವೇಳೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿರುವುದರಿಂದ ಅಧಿಕಾರಿಗಳಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಎಫ್‌ಐಆರ್‌ನಲ್ಲಿ ಶಾಸಕ ಸಂಗಮೇಶ್‌ ಪುತ್ರನ ಹೆಸರಿಲ್ಲ. ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗಿದೆ. ಹೀಗಾಗಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿಕೆ ನೀಡುವ ಬದಲು ಬೀದಿಗಿಳಿದು ಹೋರಾಟ ಮಾಡಬೇಕು ಎಂದು ಹೇಳಿದರು.

ಕಳೆದ ದಿನಗಳ ಹಿಂದೆ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಮೈಸೂರಿನಲ್ಲಿ ಯಾರನ್ನೂ ಬಂಧಿಸಿಲ್ಲ. ಇಡೀ ಸರ್ಕಾರ ಗಲಭೆಕೋರರ ಪರವಾಗಿ ನಿಂತಿದೆ. ಅದರ ಬದಲು ಪೊಲೀಸ್‌ ಅಧಿಕಾರಿಗಳನ್ನೇ ಟೀಕಿಸಲಾಗುತ್ತಿದೆ. ಮುಸ್ಲಿಮ್‌ರಿಂದ ಗೆದ್ದ ಸಚಿವರು ಅವರ ಪರವಾಗಿ ಮಾತಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನೂ ಭದ್ರಾವತಿಯ ಮಹಿಳಾ ಅಧಿಕಾರಿಯ ಮೇಲೆ ಒತ್ತಡ ಹೇರಲಾಗಿದೆ. ಆ ಭಯದಿಂದಲೇ ಅವರು ಯಾರ ಮೇಲೂ ದೂರು ನೀಡಿಲ್ಲ. ದೂರು ನೀಡಿದರೂ ಸರ್ಕಾರ ಅಧಿಕಾರಿಯ ಪರವಾಗಿ ನಿಲ್ಲುವುದಿಲ್ಲ. ಪೊಲೀಸ್‌ ಅಧಿಕಾರಿಗೆ ಸ್ಟಾರ್‌ ನೀಡಿದವರು ಯಾರು ಎಂದು ಸಚಿವ ರಾಜಣ್ಣ ಪ್ರಶ್ನೆ ಮಾಡಿದ್ದಾರೆ. ಪೊಲೀಸರಿಗೆ ಜನರು ಸ್ಟಾರ್‌ ನೀಡಿದ್ದಾರೆ. ಅವರಿಗೆ ಜನರ ತೆರಿಗೆ ಹಣದಿಂದ ಸಂಬಳ ನೀಡಲಾಗುತ್ತಿದೆಯೇ ಹೊರತು, ಸಚಿವರ ಹಣದಿಂದ ನೀಡುತ್ತಿಲ್ಲ. ಪೊಲೀಸರನ್ನು ಪ್ರಶ್ನಿಸುವುದಿದ್ದರೆ ಕಚೇರಿಯಲ್ಲಿ ಕರೆದು ಮಾತಾಡಬೇಕು. ಅದನ್ನು ಬಿಟ್ಟು ಸಾರ್ವಜನಿಕ ಸ್ಥಳದಲ್ಲಿ ಅವರನ್ನು ನಿಂದಿಸಬಾರದು. ಹೀಗೆ ಮಾಡಿದರೆ ಪೊಲೀಸರು ಆತ್ಮವಿಶ್ವಾಸದಿಂದ ಕೆಲಸ ಮಾಡುವುದು ಹೇಗೆ? ಎಂದು ಪ್ರಶ್ನೆ ಮಾಡಿದರು.

ಅರ್ಚನ ಎಸ್‌ ಎಸ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

7 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

7 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

8 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

10 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

10 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

14 hours ago