ರಾಜ್ಯ

ಮಹಾಕುಂಭಮೇಳದಲ್ಲಿ ಅಮಿತ್‌ ಶಾ ಸ್ನಾನ: ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಆರ್.ಅಶೋಕ್‌ ಕಿಡಿ

ಬೆಂಗಳೂರು: 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ವಿರುದ್ಧ ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಪಕ್ಷಕ್ಕೆ ಹಿಂದೂ ಧರ್ಮವೆಂದರೆ , ಭಾರತೀಯ ಸಂಸ್ಕೃತಿ, ಪರಂಪರೆ ಎಂದರೆ ಯಾಕಿಷ್ಟು ದ್ವೇಷ, ಅಸಡ್ಡೆ? ಎಂದು ಪ್ರಶ್ನಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ, 144 ವರ್ಷಕ್ಕೊಮ್ಮೆ ಬರುವ ಮಹಾಕುಂಭಮೇಳದ ಈ ಪರಮ ಪವಿತ್ರ ಪರ್ವಕಾಲದಲ್ಲಿ ತ್ರಿವೇಣಿ ಸಂಗಮದಲ್ಲಿ ಒಮ್ಮೆ ಮಿಂದರೆ ಪಾಪಗಳೆಲ್ಲವೂ ಕಳೆಯುತ್ತದೆ, ಪುಣ್ಯ ಲಭಿಸುತ್ತದೆ ಎಂಬುದು ಕೋಟ್ಯಂತರ ಹಿಂದೂಗಳ ನಂಬಿಕೆಯಾಗಿದೆ. ಅಲ್ಲದೇ ಭಾರತೀಯತೆ, ಸನಾತನ ಧರ್ಮದ ಬಗ್ಗೆ ಕಣಕಣದಲ್ಲೂ ದ್ವೇಷ ತುಂಬಿಕೊಂಡಿರುವ ನಕಲಿ ಗಾಂಧಿ ಕುಟುಂಬವನ್ನ ಓಲೈಸುವ ಭರದಲ್ಲಿ, ಶತಕೋಟಿ ಹಿಂದೂಗಳ ನಂಬಿಕೆಯನ್ನು ಯಾಕೆ ಅಪಮಾನಿಸುತ್ತೀರಿ? ಎಂದು ವಾಗ್ದಾಳಿ ನಡೆಸಿದ್ದಾರೆ.

ಹಜ್ ಯಾತ್ರೆ ಬಗ್ಗೆಯೋ, ರಂಜಾನ್ ಉಪವಾಸದ ಬಗ್ಗೆಯೋ ಈ ರೀತಿ ಟೀಕೆ ಮಾಡುವ ಧೈರ್ಯ ತೋರಿ ನೋಡೋಣ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಲ್ಲಿ ಇನ್ನೊಬ್ಬರಿಗೆ ತೊಂದರೆಯಾಗದಂತೆ ಎಲ್ಲರಿಗೂ ತಮ್ಮ ತಮ್ಮ ಮತ, ಧರ್ಮ, ನಂಬಿಕೆಗಳನ್ನು ಆಚರಣೆ ಮಾಡುವ ಹಕ್ಕು ಮತ್ತು ಸ್ವಾತಂತ್ರ್ಯವಿದೆ ಎಂದಿದ್ದಾರೆ. ಹೀಗಿರುವಾಗ ಗಂಗೆಯಲ್ಲಿ ಮಿಂದೇಳುವ ಆಚರಣೆಯನ್ನು ಪ್ರಶ್ನೆ ಮಾಡೋದು, ಹಿಂದೂ ಧರ್ಮಕ್ಕೆ ಮಾತ್ರವಲ್ಲ ಅದು ಸಂವಿಧಾನಕ್ಕೂ ಅಪಚಾರ ಮಾಡಿದಂತೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

9 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago