ರಾಜ್ಯ

ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್‌ಬಾಸ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್‌ಬಾಸ್‌. ಅವರ ಸಲಹೆ ಮೇರೆಗೆ ಕಾಂಗ್ರೆಸ್‌ ಸರ್ಕಾರ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಭಯೋತ್ಪಾದಕರ ಸೂಚನೆ ಮೇರೆಗೆ ಅಧಿಕಾರ ನಡೆಸುತ್ತಿದ್ದು, ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಕೇಸ್‌ಗಳನ್ನು ಹಿಂಪಡೆಯಬಾರದು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಜೊತೆಗೆ ಈ ಸರ್ಕಾರ ಆಡಳಿತ ನಡೆಸುವಾಗಲೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪವನ್ನು ಎದುರಿಸುತ್ತಿದೆ. ಈ ಮಧ್ಯೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿದ್ದಾರ್ಥ ವಿಹಾರ್‌ ಟ್ರಸ್ಟ್‌ನ ನಿವೇಶನಗಳನ್ನು ವಾಪಸ್‌ ಮಾಡಿದೆ ಎಂದು ರಾಜ್ಯ ಸರ್ಕಾರದ ಹಗರಣಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ಸಿಎಂ ಸಿದ್ದರಾಮಯ್ಯರ ಮಾತುಗಳನ್ನು ಸ್ವಪಕ್ಷದವರೇ ಕೇಳುತ್ತಿಲ್ಲ. ಹಾಗಾಗಿ ಸಿದ್ದರಾಮಯ್ಯ ಮುಸ್ಲಿಂಮರನ್ನು ಓಲೈಕೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

9 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

9 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago