ರಾಜ್ಯ

ರಾಜಕೀಯ ಅಧಿಕಾರ ಹಿಡಿಯಲು ಅಂಬೇಡ್ಕರ್‌ ಹೆಸರು ಬಳಕೆ: ಸಿದ್ದರಾಮಯ್ಯ ವಿರುದ್ಧ ಆರ್‌.ಆಶೋಕ್‌ ವಾಗ್ದಾಳಿ

ಬೆಂಗಳೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕುರಿತಂತೆ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಆ ಹೇಳಿಕೆ ವಿರೋಧಿಸಿ ಬಹಿರಂಗ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ ನಾಯಕ ಆರ್‌.ಆಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಸ್ಮರಣೆ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ ಎಂದು ಬಾಯಿ ಮಾತಿನಲ್ಲಿ ಹೇಳಿದರೆ ಸಾಲದು, ಅವರ ವಿಚಾರಧಾರೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಜಪವ ಮಾಡಿದರೇನು ತಪವ ಮಾಡಿದರೇನು ವಿಪರೀತ ಕಪಟಗುಣ ಕಲುಷವಿದ್ದವರು ಎಂಬ ಕನಕದಾಸರ ವಾಣಿಯಂತೆ ಬಾಯಿ ಮಾತಿಗೆ ಅವರ ಮೇಲೆ ತೋರಿಕೆ ಪ್ರೀತಿ ಮಾಡುವ ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿ ಸಿಎಂ ಸಿದ್ದರಾಮಯ್ಯ ಎಂದು ಕಿಡಿಕಾರಿದ್ದಾರೆ.

ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಸೋಲಿಸಿದ, ಅವರ ಅಂತ್ಯ ಸಂಸ್ಕಾರಕ್ಕೆ ಚೂರು ಭೂಮಿ ನೀಡದ ಕಾಂಗ್ರೆಸ್‌ ಪಕ್ಷದ ಮಹಾ ಮೋಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಮಿತ್‌ ಶಾ ಅವರ ಭಾಷಣದ ವಿಡಿಯೋವನ್ನು ತಿರುಚಿ ಮತ್ತೊಮ್ಮೆ ಅವರಿಗೆ ಅವಮಾನಿಸುತ್ತಿದ್ದೀರಿ ಎಂದು ಆರೋಪಿಸಿದರು.

ಕಾಂಗ್ರೆಸ್‌ ಪಕ್ಷವು ತಮಗೆ ತಾವೇ ಭಾರತ ರತ್ನ ಪ್ರಶಸ್ತಿಯನ್ನು ಕೊಟ್ಟುಕೊಂಡಿದೆ. ಆದರೆ ಭಾರತ ದೇಶಕ್ಕಾಗಿ ಇಷ್ಟೊಂದು ಸೇವೆ ಮಾಡಿದ ಬಾಬಾ ಸಾಹೇಬ್‌ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ನಿರಾಕರಿಸಿತ್ತು. ಅವರಿಗೆ ಈ ಪರಮೋಚ್ಛ ಗೌರವ ಲಭಿಸಲು ಬಿಜೆಪಿ ಸರ್ಕಾರ ಕಾರಣ ಎಂದು ಹೇಳಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರಾರು ಕೋಟಿ ಖರ್ಚು ಮಾಡಿ ಸಿದ್ದರಾಮೋತ್ಸವ ಮಾಡಿಸಿಕೊಳ್ಳುತ್ತಾರೆ. ಆದರೆ ಅಂಬೇಡ್ಕರ್‌ ಉತ್ಸವ ಮಾಡಲು ಹಿಂದೇಟು ಹಾಕುತ್ತಾರೆ. ಅಂಬೇಡ್ಕರ್‌ ಅವರು ನೆನಪಾಗೋದು ಚುನಾವಣೆ ಸಂದರ್ಭದಲ್ಲಿ ಮಾತ್ರ. ರಾಜಕೀಯ ಅಧಿಕಾರ ಹಿಡಿಯಲು, ಹೈಕಮಾಂಡ್‌ ಮೆಚ್ಚಿಸಲು ಅವರ ಹೆಸರನ್ನು ಬಳಸಿಕೊಳ್ಳಲಾಗುತ್ತದೆ ಎಂದರು.

ಅಂಬೇಡ್ಕರ್‌ ಅವರ ಬಗ್ಗೆ ಬದ್ಧತೆ ಇದ್ದರೆ ಇಂದಿರಾ ಕ್ಯಾಂಟಿನ್‌ ಬದಲು ಅಂಬೇಡ್ಕರ್‌ ಕ್ಯಾಂಟಿನ್‌ ಎಂದು ಹೆಸರಿಡಬಹುದಿತ್ತಲ್ಲವೇ. ಆರೂವರೆ ವರ್ಷ ಮುಖ್ಯಮಂತ್ರಿ ಆಗಿರುವ ತಾವು ಯಾವುದಾದರೂ ಒಂದು ಯೋಜನೆಗೆ ಅಂಬೇಡ್ಕರ್‌ ಹೆಸರು ಇಟ್ಟಿದ್ದೀರಾ? ಎಂದು ಪ್ರಶ್ನಿಸಿದರು.

ಅಮಿತ್‌ ಶಾ ಅವರ ಭಾಷಣವನ್ನು ತಿರುಚಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಎಷ್ಟೇ ಮಾಡಿದರು, ಅಂಬೇಡ್ಕರ್‌ ಅವರಿಗೆ ನೀವು ಮಾಡಿರುವ ಅವಮಾನ, ಸಂವಿಧಾನದ ಬಗ್ಗೆ ನಿಮಗೆ ಇರುವ ಆಷಾಢಭೂತಿತನ ಮಾರೆಮಾಚಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.

ಆಂದೋಲನ ಡೆಸ್ಕ್

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

2 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

3 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

3 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

3 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

4 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

4 hours ago