ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಆ ಹೇಳಿಕೆ ವಿರೋಧಿಸಿ ಬಹಿರಂಗ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಆಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಸ್ಮರಣೆ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ ಎಂದು ಬಾಯಿ ಮಾತಿನಲ್ಲಿ ಹೇಳಿದರೆ ಸಾಲದು, ಅವರ ವಿಚಾರಧಾರೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ.
ಜಪವ ಮಾಡಿದರೇನು ತಪವ ಮಾಡಿದರೇನು ವಿಪರೀತ ಕಪಟಗುಣ ಕಲುಷವಿದ್ದವರು ಎಂಬ ಕನಕದಾಸರ ವಾಣಿಯಂತೆ ಬಾಯಿ ಮಾತಿಗೆ ಅವರ ಮೇಲೆ ತೋರಿಕೆ ಪ್ರೀತಿ ಮಾಡುವ ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿ ಸಿಎಂ ಸಿದ್ದರಾಮಯ್ಯ ಎಂದು ಕಿಡಿಕಾರಿದ್ದಾರೆ.
ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ, ಅವರ ಅಂತ್ಯ ಸಂಸ್ಕಾರಕ್ಕೆ ಚೂರು ಭೂಮಿ ನೀಡದ ಕಾಂಗ್ರೆಸ್ ಪಕ್ಷದ ಮಹಾ ಮೋಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಮಿತ್ ಶಾ ಅವರ ಭಾಷಣದ ವಿಡಿಯೋವನ್ನು ತಿರುಚಿ ಮತ್ತೊಮ್ಮೆ ಅವರಿಗೆ ಅವಮಾನಿಸುತ್ತಿದ್ದೀರಿ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷವು ತಮಗೆ ತಾವೇ ಭಾರತ ರತ್ನ ಪ್ರಶಸ್ತಿಯನ್ನು ಕೊಟ್ಟುಕೊಂಡಿದೆ. ಆದರೆ ಭಾರತ ದೇಶಕ್ಕಾಗಿ ಇಷ್ಟೊಂದು ಸೇವೆ ಮಾಡಿದ ಬಾಬಾ ಸಾಹೇಬ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ನಿರಾಕರಿಸಿತ್ತು. ಅವರಿಗೆ ಈ ಪರಮೋಚ್ಛ ಗೌರವ ಲಭಿಸಲು ಬಿಜೆಪಿ ಸರ್ಕಾರ ಕಾರಣ ಎಂದು ಹೇಳಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರಾರು ಕೋಟಿ ಖರ್ಚು ಮಾಡಿ ಸಿದ್ದರಾಮೋತ್ಸವ ಮಾಡಿಸಿಕೊಳ್ಳುತ್ತಾರೆ. ಆದರೆ ಅಂಬೇಡ್ಕರ್ ಉತ್ಸವ ಮಾಡಲು ಹಿಂದೇಟು ಹಾಕುತ್ತಾರೆ. ಅಂಬೇಡ್ಕರ್ ಅವರು ನೆನಪಾಗೋದು ಚುನಾವಣೆ ಸಂದರ್ಭದಲ್ಲಿ ಮಾತ್ರ. ರಾಜಕೀಯ ಅಧಿಕಾರ ಹಿಡಿಯಲು, ಹೈಕಮಾಂಡ್ ಮೆಚ್ಚಿಸಲು ಅವರ ಹೆಸರನ್ನು ಬಳಸಿಕೊಳ್ಳಲಾಗುತ್ತದೆ ಎಂದರು.
ಅಂಬೇಡ್ಕರ್ ಅವರ ಬಗ್ಗೆ ಬದ್ಧತೆ ಇದ್ದರೆ ಇಂದಿರಾ ಕ್ಯಾಂಟಿನ್ ಬದಲು ಅಂಬೇಡ್ಕರ್ ಕ್ಯಾಂಟಿನ್ ಎಂದು ಹೆಸರಿಡಬಹುದಿತ್ತಲ್ಲವೇ. ಆರೂವರೆ ವರ್ಷ ಮುಖ್ಯಮಂತ್ರಿ ಆಗಿರುವ ತಾವು ಯಾವುದಾದರೂ ಒಂದು ಯೋಜನೆಗೆ ಅಂಬೇಡ್ಕರ್ ಹೆಸರು ಇಟ್ಟಿದ್ದೀರಾ? ಎಂದು ಪ್ರಶ್ನಿಸಿದರು.
ಅಮಿತ್ ಶಾ ಅವರ ಭಾಷಣವನ್ನು ತಿರುಚಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಎಷ್ಟೇ ಮಾಡಿದರು, ಅಂಬೇಡ್ಕರ್ ಅವರಿಗೆ ನೀವು ಮಾಡಿರುವ ಅವಮಾನ, ಸಂವಿಧಾನದ ಬಗ್ಗೆ ನಿಮಗೆ ಇರುವ ಆಷಾಢಭೂತಿತನ ಮಾರೆಮಾಚಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…