ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದ ಮೇಲೆ ಆಸ್ಪತ್ರೆಗಳ ಮೇಲೆ ಮಾತ್ರವಲ್ಲ, ರಾಜ್ಯದ ಜನತೆ ಭರವಸೆ ಕಳೆದುಕೊಂಡಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿದ್ದು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಗರ್ಭಿಣಿ ಮಹಿಳೆಯರು ಹಿಂದೇಟು ಹಾಕುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರೇ, ಬಡವರಿಗೆ ಪಾಲಿಗೆ ಸಂಜೀವನಿಯಾಗಿದ್ದ ಸರ್ಕಾರಿ ಆಸ್ಪತ್ರೆಗಳು ತಮ್ಮ ಸರ್ಕಾರ ನಿರ್ಲಕ್ಷ್ಯದಿಂದ ಸಾವಿನ ಕೂಪಗಳಾಗಿವೆ. ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಇಲ್ಲದ ಮೇಲೆ ಬಡವರು ಎಲ್ಲಿಗೆ ಹೋಗಬೇಕು? ಎಂದು ಪ್ರಶ್ನಿಸಿದ್ದಾರೆ.
ಕೇವಲ ಸರ್ಕಾರಿ ಆಸ್ಪತ್ರೆಗಳ ಮೇಲೆ ಮಾತ್ರವಲ್ಲ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಇಡೀ ಕಾಂಗ್ರೆಸ್ ಸರ್ಕಾರದ ಮೇಲೆ ಕರ್ನಾಟಕದ ಜನತೆ ಭರವಸೆ ಕಳೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.