ರಾಜ್ಯ

ಬಾಣಂತಿಯರ ಸಾವು ಪ್ರಕರಣ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ಬಂದ ಮೇಲೆ ಆಸ್ಪತ್ರೆಗಳ ಮೇಲೆ ಮಾತ್ರವಲ್ಲ, ರಾಜ್ಯದ ಜನತೆ ಭರವಸೆ ಕಳೆದುಕೊಂಡಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿದ್ದು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಗರ್ಭಿಣಿ ಮಹಿಳೆಯರು ಹಿಂದೇಟು ಹಾಕುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರೇ, ಬಡವರಿಗೆ ಪಾಲಿಗೆ ಸಂಜೀವನಿಯಾಗಿದ್ದ ಸರ್ಕಾರಿ ಆಸ್ಪತ್ರೆಗಳು ತಮ್ಮ ಸರ್ಕಾರ ನಿರ್ಲಕ್ಷ್ಯದಿಂದ ಸಾವಿನ ಕೂಪಗಳಾಗಿವೆ. ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಇಲ್ಲದ ಮೇಲೆ ಬಡವರು ಎಲ್ಲಿಗೆ ಹೋಗಬೇಕು? ಎಂದು ಪ್ರಶ್ನಿಸಿದ್ದಾರೆ.

ಕೇವಲ ಸರ್ಕಾರಿ ಆಸ್ಪತ್ರೆಗಳ ಮೇಲೆ ಮಾತ್ರವಲ್ಲ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಇಡೀ ಕಾಂಗ್ರೆಸ್‌ ಸರ್ಕಾರದ ಮೇಲೆ ಕರ್ನಾಟಕದ ಜನತೆ ಭರವಸೆ ಕಳೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

23 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago