ಬೆಂಗಳೂರು: ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ವಿಪಕ್ಷ ನಾಯಕರ ತೇಜೋವಧೆಯ ಹುನ್ನಾರಕ್ಕೆ ಪ್ರಯತ್ನ ಮಾಡುತ್ತಿದೆ ಎಂದು ವಿರೋಧದ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳು ಮತ್ತು ಹಗರಣಗಳಿಂದ ಜನರ ಗಮನ ಬೇರೆಡೆ ಸೆಳೆಯಲು ವಿಪಕ್ಷ ನಾಯಕರ ತೇಜೋವಧೆ ಮಾಡುವ ಹುನ್ನಾರ ನಡೆಸಿದೆ. ಅದಕ್ಕೆ ಪೂರಕವಾಗುವಂತೆ ಬಸ್ ದರ ಏರಿಕೆ ವಿರುದ್ಧ ನಿನ್ನೆ(ಜ.3) ಪ್ರತಿಭಟನೆ ಮಾಡುತ್ತಿರುವ ವೇಳೆ ಪೊಲೀಸರೊಂದಿಗೆ ನನ್ನ ವಾಗ್ವಾದದ ವಿಡಿಯೋ ತುಣುಕನ್ನು ಕಟ್ ಮಾಡಿ, ಎಡಿಟ್ ಮಾಡಿ ಹರಿಬಿಟ್ಟಿರುವುದು ಈ ಷಡ್ಯಂತ್ರದ ಭಾಗವೇ ಆಗಿದೆ ಎಂದು ಕಿಡಿಕಾರಿದೆ.
ಕಾಂಗ್ರೆಸ್ ಪಕ್ಷದ ಈ ಕುತಂತ್ರದ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ಸಲ್ಲಿಸಲಾಗಿದ್ದು, ನನ್ನ ತೇಜೋವಧೆ ಮಾಡಲು ಪ್ರಯತ್ನಿಸಿದ ತಪ್ಪಿತಸ್ಥರಿಗೆ ಶಿಕ್ಷೆ ಆಗುವವರೆಗೂ ಕಾನೂನು ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.